ಕೊಳ್ಳೇಗಾಲ: ತಾಲ್ಲೂಕಿನ ಮಧುವನಹಳ್ಳಿಯಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಗ್ರಾಮದ ರಂಗದ ಬೀದಿಯ ಮಂಗಳಮ್ಮ ಎಂಬ ಮಹಿಳೆಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಪ್ರತಿನಿತ್ಯ ನಗರ ಪ್ರದೇಶಗಳ ಬಾರ್ಗಳಿಂದ ಮದ್ಯ ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಲುವಾಗಿ ಕೊಳ್ಳೇಗಾಲದಿಂದ ಗ್ರಾಮಕ್ಕೆ ತರುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಸುಪ್ರೀತ್ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಮಹಿಳೆಯ ಬ್ಯಾಗ್ ಪರಿಶೀಲನೆ ಮಾಡಿದಾಗ 90 ಎಂಎಲ್ನ 78 ಮದ್ಯದ ಪೌಚ್ ಸಿಕ್ಕಿದೆ. ಇವರು ಗ್ರಾಮದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದರು ಎಂದು ಅನೇಕ ದೂರ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.