ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವನಸಮುದ್ರದ ದರ್ಗಾ ಸಮೀಪ ಮಹಿಳೆ ಶವ ಪತ್ತೆ

Published 6 ಜುಲೈ 2024, 15:25 IST
Last Updated 6 ಜುಲೈ 2024, 15:25 IST
ಅಕ್ಷರ ಗಾತ್ರ

ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ದರ್ಗಾ ಸಮೀಪ ಸುಮಾರು 50 ವರ್ಷ ವಯಸ್ಸಿನ ಮಹಿಳೆ ಶವ ಪತ್ತೆಯಾಗಿದೆ.

‘ಮಹಿಳೆಯು ಹಸಿರು ಬಣ್ಣದ ಚೂಡಿಧಾರ್ ಧರಿಸಿದ್ದು, ಕೊಲೆಯೋ ಅಥವಾ ಆತ್ಮಹತ್ಯೆಯೋ ತಿಳಿದುಬಂದಿಲ್ಲ. ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಎಎಸ್‌ಪಿ ಉದೇಶ್, ಡಿವೈಎಸ್‌ಪಿ ಧರ್ಮೇಂದ್ರ, ಸಿಪಿಐ ಶಿವಮಾದಯ್ಯ, ಪಿಎಸ್ಐ ಗಣೇಶ್ ತೆರಳಿ ಮೃತ ದೇಹ ಪರಿಶೀಲಿಸಿ ನಂತರ ಸ್ಥಳ ಪರಿಶೀಲನೆ ನಡೆಸಿದರು.

ಚಾಮರಾಜನಗರದಿಂದ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಿತು. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT