ಮಹದೇಶ್ವರ ಬೆಟ್ಟ: ಹನೂರು ತಾಲ್ಲೂಕಿನ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಮಂಗಳವಾರ ಸಂಜೆ ಕಾಲ್ನಡಿಗೆಯಲ್ಲಿ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹೊನಗನಹಳ್ಳಿ ಗ್ರಾಮದ ಲಕ್ಷ್ಮಿ (40) ಮೃತಪಟ್ಟವರು.

ಗ್ರಾಮದಿಂದ ಎಂಟು ಮಂದಿ ಬೆಟ್ಟಕ್ಕೆ ಬಂದಿದ್ದರು. ಈ ಪೈಕಿ ಲಕ್ಷ್ಮಿ, ಪದ್ಮಮ್ಮ, ಪುಟ್ಟರಾಜು ಅವರು ತಾಳಬೆಟ್ಟದಲ್ಲಿ ವಾಹನದಿಂದ ಇಳಿದು ಪಾದಯಾತ್ರೆ ಮೂಲಕ ಬೆಟ್ಟಕ್ಕೆ ಹೊರಟರು. ಸಂಜೆ 7 ಗಂಟೆಯ ಸುಮಾರಿಗೆ ರಂಗಸ್ವಾಮಿ ಒಡ್ಡು ಮತ್ತು ಆನೆ ತಲೆದಿಂಬ ನಡುವಿನ ಕಾಡು ದಾರಿಯಲ್ಲಿ ಕಾಡಾನೆಯೊಂದ ದಾಳಿ ಮಾಡಿದೆ. ಈ ಸಂದರ್ಭದಲ್ಲಿ ಆನೆ ತುಳಿತಕ್ಕೆ ಒಳಗಾದ ಲಕ್ಷ್ಮಿ ಅವರು ಸ್ಥಳದಲ್ಲೇ ಮೃತಪಟ್ಟರು.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಟ್ಟದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.