ಹನೂರು: ನೊಂದವರ ಪರ, ಮಹಿಳೆಯರ ಪರ ಯಾವಾಗಲು ಮಹಿಳಾ ಆಯೋಗ ಇರುತ್ತದೆ. ನೊಂದ ಮಹಿಳೆಯರು ಆಯೋಗದ ಸಹಾಯ ಪಡೆದುಕೊಳ್ಳಿ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ಪಟ್ಟಣದ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಹನೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜೀವನದಲ್ಲಿ ಮುಂದೆ ಬರಬೇಕು ಎಂದರೆ ಶಿಕ್ಷಣ ತುಂಬ ಮುಖ್ಯ. ಮೊದಲು ಎಲ್ಲರೂ ಶಿಕ್ಷಣ ಪಡೆಯಬೇಕು. ಜೊತೆಗೆ ತಮ್ಮವರನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಆ ಮುಖೇನ ನಮ್ಮ ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು. ಇಲ್ಲವಾದಲ್ಲಿ ಮಹಿಳೆ ಮತ್ತಷ್ಟು ಶೋಷಣೆಗೆ ಒಳಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಾಕಷ್ಟು ಸಮಸ್ಯೆಗಳು ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಂಡು ಬಂದಿದೆ. ಮಹಿಳೆಯರು ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ನಾನು ನೋಡಿದ್ದೇನೆ. ಅಧಿಕಾರಿಗಳ ಗಮನಕ್ಕೆ ಸಹ ತಂದಿದ್ದು, ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ. ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿಕೊಡಬೇಕು ಎಂದು ಸೂಚಿಸಿದುರ.

ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿ, ‘ಪತ್ರಕರ್ತರ ಸಮಸ್ಯೆಗಳನ್ನು ನೋಡಿದ್ದೇನೆ. ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಅಲ್ಲದೆ ಪತ್ರಿಕಾ ಭವನಕ್ಕೆ ನನ್ನ ಕೈಲಾದಷ್ಟು ಸಹಾಯ ಮಾಡುತ್ತೇನೆ. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಸ್ತೆ ಸಮಸ್ಯೆ ಇದೀಗ ಬಹುತೇಕ ಬಗೆಹರಿದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಮಾಡುವುದೇ ನನ್ನ ಗುರಿ’ ಎಂದರು.

ದತ್ತಿ ಪ್ರಶಸ್ತಿ: ಇದೆ ಸಂದರ್ಭ ಹನೂರು ತಾಲ್ಲೂಕು ಕ್ರಿಕೆಟ್ ಕ್ಲಬ್ ಅಧ್ಯಕ್ಷ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಅಭಿಲಾಶ್ ಗೌಡರವರ ತಾತ ಬೋಳೆಗೌಡ ಮತ್ತು ಅಜ್ಜಿ ಚಂದ್ರಮ ಜ್ಞಾಪಕಾರ್ಥ ದತ್ತಿ ಪ್ರಶಸ್ತಿಯನ್ನು ವರದಿಗಾರ ರಮೇಶ್ ಅವರಿಗೆ ಹಾಗೂ ಹಿರಿಯ ಪತ್ರಕರ್ತ ದೇವರಾಜ್ ನಾಯ್ಡು ಅವರ ತಂದೆ ತಾಯಿ ಹೆಸರಿನಲ್ಲಿ ವರದಿಗಾರ ಪ್ರಭುಗೆ ದತ್ತಿ ಪ್ರಶಸ್ತಿ ಹಾಗೂ ಕಾಮಗೆರೆ ಸೋಮಶೇಖರ್, ಕಳೆದ 40 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆ ನಿರಂತರ ಸೇವೆ ಗುರುತಿಸಿ ರೇಷ್ಮೆನಾಡು ಪತ್ರಿಕೆಯ ಸಂಪಾದಕ ಸವಿತಾ ಜಯಂತ್ ಅವರು ತಮ್ಮ ತಂದೆ ಸದಾಶಿವ ಗಟ್ನಾವಾಡಿ ಅವರ ಜ್ಞಾಪಕಾರ್ಥ ದತ್ತಿ ಪ್ರಶಸ್ತಿ ನೀಡಿದರು.

ಮಾಜಿ ಶಾಸಕರಾದ ಆರ್. ನರೇಂದ್ರ, ಪರಿಮಳ ನಾಗಪ್ಪ, ತಹಶೀಲ್ದಾರ್ ಚೈತ್ರಾ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಮ್ತಾಜ್ ಭಾನು, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಅಧ್ಯಕ್ಷ ದೇವರಾಜು ಕಪ್ಪಸೋಗೆ, ತಾಲ್ಲೂ ಅಧ್ಯಕ್ಷ ಮಹಾದೇಶ್, ಗೌರವಾಧ್ಯಕ್ಷ ದೇವರಾಜು ನಾಯ್ಡು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.