ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲಾಧಿಕಾರಿ ಕಿರುಕುಳ: ಕೈ ಕೊಯ್ದುಕೊಂಡ ನೌಕರ

Last Updated 18 ಮಾರ್ಚ್ 2021, 14:35 IST
ಅಕ್ಷರ ಗಾತ್ರ

ಚಾಮರಾಜನಗರ: ಮೇಲಾಧಿಕಾರಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಖಜಾನೆ ಇಲಾಖೆಯ ನೌಕರರೊಬ್ಬರು ಬುಧವಾರ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯಲ್ಲಿ ಬ್ಲೇಡ್‌ನಿಂದ ಕೈಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಇಲಾಖೆಯ ‘ಸಿ’ ಗ್ರೂಪ್‌ ನೌಕರ ಯೂಸುಫ್‌ ಖಾನ್‌ ಕೈಕೊಯ್ದುಕೊಂಡವರು. ಅವರಿಗೆ ದೊಡ್ಡ ಮಟ್ಟಿನ ಗಾಯಗಳಾಗಿಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ.

ಜಿಲ್ಲಾ ಖಜಾನೆ ಅಧಿಕಾರಿಯಾಗಿರುವ ವರಲಕ್ಷ್ಮಿ ಅವರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಯೂಸುಫ್‌ ಅವರು ಆರೋಪಿಸಿದ್ದಾರೆ.

‘ನನ್ನ ಮಗಳು ಡಿಗ್ರಿ ಓದುತ್ತಿದ್ದು, ಸ್ಟ್ರಾಂಗ್‌ ರೂಂ ಕರ್ತವ್ಯಕ್ಕೆ ಹಾಕಿದ್ದಾರೆ. ಈ ಕರ್ತವ್ಯಕ್ಕೆ ನಿಯೋಜಿಸಿದರೆ ಅವಳ ಓದಿಗೆ ಅಡಚಣೆಯಾಗುತ್ತದೆ ಎಂದು ವಿನಂತಿಸಿದರೂ ನೋಟಿಸ್‌ ಕೊಟ್ಟಿದ್ದಾರೆ. ಮಾನಸಿಕ ಕಿರುಕುಳ ನೀಡುತ್ತಿದ್ದಾರೆ’ ಎಂದು ಅವರು ದೂರಿದ್ದಾರೆ.

ಈ ಸಂಬಂಧ ಠಾಣೆಯಲ್ಲಿ ದೂರು ದಾಖಲಾಗಿಲ್ಲ.ಪ್ರತಿಕ್ರಿಯೆ ಪಡೆಯಲು ವರಲಕ್ಷ್ಮಿ ಅವರಿಗೆ ಕರೆ ಮಾಡಿದರೂ, ಸಂಪರ್ಕ ಸಾಧ್ಯವಾಗಲಿಲ್ಲ.

ಯೂಸುಫ್‌ ಅವರಿಗೆ ಸೋಮವಾರ ಸ್ಟ್ರಾಂಗ್‌ ರೂಂ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆದರೆ, ಅವರು ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಈ ಸಂಬಂಧ ವರಲಕ್ಷ್ಮಿ ಅವರು ನೋಟಿಸ್‌ ಜಾರಿ ಮಾಡಿದ್ದರು ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT