ಮಂಗಳವಾರ, ಮೇ 11, 2021
19 °C

ಚಾಮರಾಜನಗರ: ವಿಶ್ವ ದೃಶ್ಯಕಲಾ ದಿನ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಖ್ಯಾತ ಚಿತ್ರ ಕಲಾವಿದ ಲಿಯೊನಾರ್ಡೊ ಡಾ ವಿಂಚಿ ಅವರ ಜನ್ಮ ದಿನಾಚರಣೆ ಅಂಗವಾಗಿ ನಗರದಲ್ಲಿ ಗುರುವಾರ ವಿಶ್ವ ದೃಶ್ಯಕಲಾ ದಿನಾಚರಣೆ ಕಾರ್ಯಕ್ರಮ ನಡೆಯಿತು. 

ಕರ್ನಾಟಕ ಲಲಿತಾ ಕಲಾ ಅಕಾಡೆಮಿಯು ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿ ದೇವಿ ಅವರು, ‘ಜಿಲ್ಲೆಯಲ್ಲಿ ಹಲವು ಪ್ರತಿಭಾವಂತ ಚಿತ್ರ ಕಲಾವಿದರಿದ್ದಾರೆ. ಜಿಲ್ಲೆಯ ಕೀರ್ತಿಯನ್ನು ಬೆಳಗಿಸುತ್ತಿದ್ದಾರೆ. ಅವರ ಕಲೆಯನ್ನು ಗುರುತಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕಾದ ಅಗತ್ಯವಿದೆ’ ಎಂದು ಹೇಳಿದರು. 

ಕಲಾವಿದ ಸಿ.ರಾಜಶೇಖರ್, ಅರಮನೆ ಚಿತ್ರ ಕಲಾವಿದ ಎ.ಎಂ.ಸ್ವಾಮಿ ಅವರು ಚಿತ್ರ ಬಿಡಿಸಿದರು. 

ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಹಾಯಕನಿರ್ದೇಶಕ ಎಚ್.ಕೆ.ಗಿರೀಶ್, ತಹಶೀಲ್ದಾರ್ ವೈ.ಎಂ.ನಂಜಯ್ಯ, ಮಹಿಳಾ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ ಬಿ.ಪುಟ್ಟಸ್ವಾಮಿ, ಲಲಿತಕಲಾ ಅಕಾಡೆಮಿ ಸದಸ್ಯ ಯಳಂದೂರು ದುಂಡು ಮಹದೇವ,  ಚಿತ್ರ ಕಲಾವಿದರಾದ ಸಿ.ಎನ್.ಮಹೇಶ್, ಬಿ.ಸಿ.ದೇವರಾಜು, ಅನಿಲ್‌ಕುಮಾರ್, ಮಂಜೇಶ್, ಕುಮಾರ್ ನಾಗವಳ್ಳಿ, ಕಾಳಿಪ್ರಸಾದ್, ಹಾದಿಮನಿ, ಗಣೇಶ್, ಅವಿನಾಶ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು