ಗುಂಡ್ಲುಪೇಟೆ: ‘ತಾಯಿಯ ಎದೆ ಹಾಲು ಮಗುವಿಗೆ ಅತ್ಯುತ್ತಮ ಪೋಷಣೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ ಅಭಿಪ್ರಾಯಪಟ್ಟರು.

ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಚಾಮರಾಜನಗರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯ ಇಲಾಖೆ ಹಾಗೂ ಕೈಲಾಸ್ ಸತ್ಯಾರ್ಥಿ ಚಿಲ್ಟ್ರನ್ ಫೌಂಡೇಶನ್ ಸಹಯೋಗದಲ್ಲಿ ಶುಕ್ರವಾರ ನಡೆದ ‘ವಿಶ್ವ ಸ್ತನ್ಯಪಾನ ಸಪ್ತಾಹ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಾಯಿಯ ಎದೆ ಹಾಲು ಶಿಶುಗಳಿಗೆ ಅಮೃತವಿದ್ದಂತೆ. ಇದು ಬಾಲ್ಯದಲ್ಲಿ ಕಾಣಿಸಿಕೊಳ್ಳುವ ಕಾಯಿಲೆಗಳಿಂದ ಶಿಶುಗಳನ್ನು ರಕ್ಷಿಸಲು ಸಹಾಯ ಮಾಡುವ ಪ್ರತಿಕಾಯಕ ಹೊಂದಿರುತ್ತದೆ. ಎದೆ ಹಾಲು ಮಗುವಿನ ಅರೋಗ್ಯಕರ ಬೆಳವಣಿಗೆಗೆ ಅಗತ್ಯವಾದ ಎಲ್ಲಾ ಪೋಷಕಾಂಶಗಳನ್ನು ಹೊಂದಿದ್ದು, ಆರೋಗ್ಯ ವೃದ್ಧಿಸುವುದು ಮಾತ್ರವಲ್ಲದೆ ಹಾಲುಣಿಸುವುದರಿಂದ ತಾಯಿ ಮತ್ತು ಮಗುವಿನ ನಡುವಿನ ವಾತ್ಸಲ್ಯ ಹೆಚ್ಚಾಗುತ್ತದೆ. ತಾಯಿಯ ಎದೆ ಹಾಲಿನ ಮಹತ್ವ ಮತ್ತು ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತದೆ ಎಂದು ತಿಳಿಸಿದರು.

ಮಕ್ಕಳ ತಜ್ಞೆ ಡಾ.ಛಾಯಾದೇವಿ ಮಾತನಾಡಿ, ಮಗು ಜನಿಸಿದ ಒಂದು ಗಂಟೆಯೊಳಗೆ ಸ್ತನ್ಯಪಾನ ಮಾಡಿಸುವುದು ಕೊಲೊಸ್ಟ್ರೋಮ್ ಸೇವನೆಯ ಪ್ರಾಮುಖ್ಯತೆ ಹಾಗೂ ಮೊದಲ ಆರು ತಿಂಗಳವರೆಗೆ ಕಡ್ಡಾಯ ಸ್ತನ್ಯಪಾನ ಮಾಡುವುದರಿಂದ ಆರಂಭಿಕ ಬಾಲ್ಯದ ಬೆಳವಣಿಗೆ ಹೆಚ್ಚಿಸಲು ಮತ್ತು ಪೌಷ್ಟಿಕಾಂಶ ಸುಧಾರಿಸುತ್ತದೆ ಎಂದರು.

ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಸ್ತನ್ಯಪಾನ ಮಾಡಿಸುವುದು ಬಹಳ ಮುಖ್ಯ. ಎಲ್ಲರೂ ಎಚ್ಚೆತ್ತುಕೊಂಡು ಎದೆ ಹಾಲಿನ ಮಹತ್ವದ ಬಗ್ಗೆ ಅರಿತುಕೊಂಡು ಎಲ್ಲಾ ತಾಯಂದಿರು ಹಾಗೂ ಗರ್ಭಿಣಿಯರು ಕನಿಷ್ಠ ಎರಡು ವರ್ಷದವರೆಗೆ ಸ್ತನ್ಯಪಾನ ಮಾಡಿಸುವಂತೆ ತಿಳಿಸಿದರು.

ಮಕ್ಕಳ ತಜ್ಞ ಡಾ.ವೇಣುಗೋಪಾಲ್, ಸಿಎಚ್ಒ ವನಿತಾ, ಪೂಜಾ, ಸಿಎಸ್ಡಬ್ಲ್ಯೂ ವೇಣು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.