ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಿಂದ ಕೆ.ಗುಡಿ ಮಾರ್ಗವಾಗಿ ಕನ್ನೇರಿ ಕಾಲೊನಿಯಿಂದ ವಾಪಸ್ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಶನಿವಾರ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.

ಚಾಲಕ ಮತ್ತು ನಿರ್ವಾಹಕರು ಅಪಾಯ ದಿಂದ ಪಾರಾಗಿದ್ದಾರೆ. ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ಬಸ್ ಉರುಳಿದೆ ಎಂದುಜನರು ತಿಳಿಸಿದರು.

ಬೆಟ್ಟದಿಂದ ಕೆ.ಗುಡಿಗೆ ಹೋಗುವ ರಸ್ತೆಯನ್ನು ದುರಸ್ತಿಗಾಗಿ ಮುಚ್ಚಲಾಗಿದೆ. ಆದರೆ, ಸಂಜೆ ಪೋಡುಗಳ ಜನರಿಗಾಗಿ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು. ಪ್ರಯಾಣಿಕರನ್ನು ಇಳಿಸಿ ವಾಪಸ್ ಆಗುವಾಗ ಬಸ್ ರಸ್ತೆ ಬದಿಗೆ ಉರುಳಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-37-532733882

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.