ಯಳಂದೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಪೂರೈಸಿದೆ. ಎಲ್ಲ ವರ್ಗಗಳ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ₹100 ಕೋಟಿ ಅನುದಾನ ವಿನಿಯೋಗಿಸಲಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು

ಬಿಳಿಗಿರಿರಂಗನಬೆಟ್ಟದ ನಾಯಕ ಸಮುದಾಯ ಭವನದ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು. ₹ 25 ಲಕ್ಷ ವೆಚ್ಚದಲ್ಲಿ ಅಡುಗೆ ಮನೆ ನಿರ್ಮಿಸಲಾಗುತ್ತದೆ. ದೇಗುಲದ ಮೆಟ್ಟಿಲುಗಳ ನಿರ್ಮಾಣ ಕಾಮಗಾರಿ ಆರಂಭಗೊಳ್ಳಲಿದೆ. ಬಸ್ ನಿಲ್ದಾಣವನ್ನು ಕೆಎಸ್ಆರ್ಟಿಸಿ ಸುಸಜ್ಜಿತ ಬಸ್ ನಿಲ್ದಾಣವಾಗಿ ಅಭಿವೃದ್ಧಿಪಡಿಸಿದೆ ಎಂದರು. ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಎಚ್.ವಿ.ಚಂದ್ರು, ಮುಖಂಡರಾದ ಪ್ರಭುಪ್ರಸಾದ್, ಜೆ.ಯೋಗೇಶ್, ನಂಜೇಗೌಡ, ಅಧಿಕಾರಿಗಳಾದ ಕೇಶವಮೂರ್ತಿ, ಪಿಡಿಒ ಶಶಿಕಲಾ, ಪ್ರತೀಪ್. ಶ್ರೀನಿವಾಸ್, ಸೋಮಣ್ಣ, ನಾಗೇಶ್ ನಾಯಕ, ಮಹದೇವಪ್ರಸಾದ್, ವೆಂಕಟೇಶ್, ಮಾದೇಶ್, ಜಯಣ್ಣ ನಾಗರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-37-1592698390

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.