ಯಳಂದೂರು: ತಾಲ್ಲೂಕಿನ ಮಾಂಬಳ್ಳಿಯ ಸುತ್ತಮುತ್ತ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಗುರುವಾರ ಅಧಿಕಾರಿಗಳು ತಪಾಸಣೆ ನಡೆಸಿದರು.

ತಾಲ್ಲೂಕು ಕಚೇರಿ ಆಹಾರ ನಿರೀಕ್ಷಕ ಎಂ.ಎಸ್.ಯದುಗಿರಿ ಮತ್ತು ತಂಡದ ಸದಸ್ಯರು ಮಾಂಬಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಬೆಳಿಗ್ಗೆ ಗ್ರಾಮಕ್ಕೆ ತೆರಳಿ ಪರಿಶೀಲಿಸಿದರು.

ಕೆಲವು ಗೋದಾಮು ಮತ್ತು ಅಂಗಡಿಗಳಲ್ಲೂ ಅಕ್ಕಿ ಪೂರೈಕೆಯಾಗಿರುವ ಬಗ್ಗೆ ತಪಾಸಣೆ ನಡೆಸಿದರು. ಅಕ್ಕಿ ಸಾಗಣೆ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿಲ್ಲ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಇಲ್ಲವೆ ಸಾಗಣೆ ಮಾಡುವುದು ಕಂಡುಬಂದರೆ ಗ್ರಾಮಸ್ಥರುಮತ್ತು ಸಾರ್ವಜನಿಕರು ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡುವಂತೆ ಜಾಗೃತಿ ಮೂಡಿಸಿ ಹಿಂತಿರುಗಿದರು.

‘ಈ ಬಗ್ಗೆ ಪೊಲೀಸ್ ಠಾಣೆಯಲ್ಲೂ ಮಾಹಿತಿ ಹಂಚಿಕೊಳ್ಳಲಾಗಿದೆ. ಅಕ್ರಮವಾಗಿ ಅಕ್ಕಿ ಸಂಗ್ರಹ ಮಾಡುವುದು ಕಂಡು ಬಂದಲ್ಲಿ ಜಂಟಿಯಾಗಿ ದಾಳಿ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ’ ಎಂದು ಆಹಾರ ನಿರೀಕ್ಷಕ ಎಂ.ಎಸ್.ಯದುಗಿರಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-37-202358732

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.