ಯಳಂದೂರು: ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿಯೂ ಆಗಿರುವ ತಹಶೀಲ್ದಾರ್ ಎಸ್.ಎನ್.ನಯನಾ ಆರ್ಥಿಕ ವರ್ಷದ ಬಜೆಟ್ ಮಂಡಿಸಿದರು.

‘ ಈ ಭಾರಿ ₹15.77.617 ಲಕ್ಷ ಉಳಿತಾಯ ಬಜೆಟ್ ಮಂಡಿಸಲಾಗಿದೆ. ರಾಜ್ಯ ಸರ್ಕಾರ ಪೂರೈಸುವ ನಿರೀಕ್ಷಿತ ಅನುದಾನ ಮತ್ತು ಪಂಚಾಯಿತಿ ಸ್ವಂತ ಸಂಪನ್ಮೂಲಗಳಿಂದ ಹೆಚ್ಚು ಉಳಿತಾಯ ಸಂಗ್ರಹ ಮಾಡಲಿದೆ’ ಎಂದು ಅವರು ಹೇಳಿದರು. ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆಪಿಎಸ್, ಪದವಿ ಕಾಲೇಜು ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಲು ₹10.40 ಲಕ್ಷ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯಲಾಗಿದೆ ಎಂದರು.

ಒಳಚರಂಡಿ ಹಾಗೂ ಎಸ್ಟಿಪಿ ವ್ಯವಸ್ಥೆಯಲ್ಲಿ ಒಳಚರಂಡಿ ನಿರ್ಮಿಸಲು ₹46 ಕೋಟಿ ಅನುಮೋದನೆ ಪಡೆಯುಲು ಜಿಲ್ಲಾಧಿಕಾರಿಗೆ ಸಲ್ಲಿಸಲಾಗಿದ್ದು, ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಪಟ್ಟಣ ಪಂಚಾಯತಿ ಖಾಯಂ ನೌಕರರಿಗೆ 12 ಮನೆಗಳನ್ನು ನಿರ್ಮಿಸಲು ₹186 ಲಕ್ಷ ಹೊಂದಿಸಲಾಗುತ್ತದೆ ಎಂದು ತಿಳಿಸಿದರು.

ಶಾಸಕ ಎ.ಆರ್.ಕೃಷ್ಣಮೂರ್ತಿ, ಮುಖ್ಯಾಧಿಕಾರಿ ಎಂ.ಪಿ.ಮಹೇಶ್ ಕುಮಾರ್, ಎಂಜಿನಿಯರ್ ನಾಗೇಂದ್ರ, ಭಾಗ್ಯಲಕ್ಷ್ಮಿ, ಲೆಕ್ಕಪರಿಶೋಧಕಿ ಭಾಗ್ಯ ಹಾಗೂ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-37-558023259

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.