ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ಬಂಗ್ಲೆಪೋಡಿನಲ್ಲಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸುವ ‘ಪ್ರಧಾನಮಂತ್ರಿ ಜನಜಾತೀಯ ಉನ್ನತ್ ಗ್ರಾಮ ಅಭಿಯಾನ’ದಡಿ (ಪಿಎಂ–ಜನ್ ಮನ್) ಸಹಯೋಗದಡಿ 25 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಅಭಿಯಾನಕ್ಕೆ ಶುಕ್ರವಾರ ತಾಲ್ಲೂಕು ಮಟ್ಟದ ಅಧಿಕಾರಿಗಳು ಚಾಲನೆ ನೀಡಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ. ಅರ್ಷದ್ ಅಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಪರಿಶಿಷ್ಟ ಪಂಗಡದ ಸಮುದಾಯ ಆಧಾರ್, ಆಯುಷ್ಮಾನ್ ಕಾರ್ಡ್, ವೋಟರ್ ಐಡಿ, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗಳ ಸೌಲಭ್ಯ ಪಡೆಯಲು ಬೇಕಾದ ದಾಖಲಾತಿಗಳನ್ನು ಮನೆ ಬಾಗಿಲಲ್ಲಿ ವಿತರಿಸಲಾಗುತ್ತದೆ. ಕಾಡಿನ ಜನರಲ್ಲಿ ಕಂಡುಬರುವ ಸಿಕಲ್ ಸೆಲ್, ಅನಿಮಿಯಾ ಹಾಗೂ ಮಕ್ಕಳ ಅಪೌಷ್ಟಿಕತೆಯನ್ನು ತಡೆಯಲು ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಪಡೆಯಲು ಅವಕಾಶ ಇದೆ. ಈ ಸವಲತ್ತುಗಳನ್ನು ಜನರು ಸದ್ಭಳಕೆ ಮಾಡಿಕೊಳ್ಳಬಹುದು’ ಎಂದರು.

ಪರಿಶಿಷ್ಟರು ಹೆಚ್ಚು ವಾಸಿಸುವ ಪ್ರದೇಶಗಳಲ್ಲಿ ಮೂಲ ಸೌಲಭ್ಯ ವಿಸ್ತರಿಸಲಾಗುತ್ತದೆ. ಪಕ್ಕಮನೆ, ಸಂಪರ್ಕ ರಸ್ತೆ, ಗ್ರಾಮೀಣ ನೀರು ಸರಬರಾಜು ಯೋಜನೆಯಡಿ ಜಲ ಜೀವನ್ ಮಿಷನ್ ಅನುಷ್ಠಾನ, ಆಫ್ ಗ್ರಿಡ್ ಸೌರ ಘಟಕ ಮತ್ತಿತರ ಸವಲತ್ತು ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೇಶವಮೂರ್ತಿ, ‘ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ, ಪೋಷಣ್ ಅಭಿಯಾನ್ ಕಾರ್ಯಕ್ರಮ ಅನುಷ್ಠಾನ, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿ ನಿಲಯ, ಸಮಗ್ರ ಶಿಕ್ಷಾ ಅಭಿಯಾನದಡಿ ಶಾಲೆ ಬಿಟ್ಟ ಮಕ್ಕಳಿಗೆ ನೆರವು, ಆದರ್ಶಾ ಗ್ರಾಮ ಯೋಜನೆ ಮತ್ತು ಮಕ್ಕಳ ಸ್ನೇಹಿ ನೆರವು ಪಡೆಯಲು ಮುಂದಾಗಬೇಕು’ ಎಂದು ಹೇಳಿದರು.

ಮುಖಂಡರಾದ ಪ್ರತೀಪ್ ಕುಮಾರ್, ಶ್ರೀನಿವಾಸ, ಆನಂದ, ರೇವಣ್ಣ, ಕಾರನಕ್ಯಾತೇಗೌಡ, ನಿಂಗಮ್ಮ, ಕೇತಮ್ಮ, ರಂಗಮ್ಮ, ಆಶಾ, ಅಂಗನವಾಡಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-37-456741859

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.