ಸೋಮವಾರ, ಜುಲೈ 26, 2021
24 °C

ಯಡಿಯೂರಪ್ಪ ಬೆಂಬಲಕ್ಕೆ ನಿಂತ ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಳ್ಳೇಗಾಲ: ರಾಜಕೀಯದಲ್ಲಿ 45 ವರ್ಷಗಳ ಅನುಭವ ಹೊಂದಿರುವ ಹಾಗೂ ಅತೀ ಬುದ್ಧಿವಂತ ರಾಜಕಾರಣಿಯಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದು ಸರಿಯಲ್ಲ ಎಂದು ಸ್ಥಳೀಯ ಶಾಸಕ ಎನ್‌.ಮಹೇಶ್‌ ಅವರು ಗುರುವಾರ ಹೇಳಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಅವರು ಜನನಾಯಕರಾಗಿದ್ದಾರೆ. ಕೋವಿಡ್‌ ಸಂಕಷ್ಟದ ಸಮಯದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಅನೇಕ ಕಡೆಗಳಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲೂ ಜನರ ಕಷ್ಟಕ್ಕೆ ಸ್ಪಂದಿಸಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿದ್ದಾರೆ. ರಾಜ್ಯದ ಮೂಲೆ ಮೂಲೆಯ ಬಗ್ಗೆಯೂ ಅವರಿಗೆ ತಿಳಿದಿದೆ. ಇಂತಹ ಮುಖ್ಯಮಂತ್ರಿಯನ್ನು ಹೇಗೆ ಬದಲಾವಣೆ ಮಾಡುತ್ತಾರೆ’ ಎಂದು ಪ್ರಶ್ನಿಸಿದರು. 

‘ಯಡಿಯೂರಪ್ಪ ಅವರು ಎಲ್ಲ ಶಾಸಕರನ್ನು ಒಂದೇ ರೀತಿ ನೋಡುತ್ತಾರೆ. ತಾರತಮ್ಯ ಮಾಡುವುದೇ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಆದರೆ, ಹೊಸಬರು 5 ರಿಂದ 6 ತಿಂಗಳ ಕಾಲ ಕಷ್ಟ ಪಡಬೇಕಾಗುತ್ತದೆ. ಕಾರಣ ಅವರಿಗೆ ರಾಜ್ಯದ ವಾಸ್ತವ ಸ್ಥಿತಿ ಸರಿಯಾಗಿ ತಿಳಿದಿರುವುದಿಲ್ಲ. ರಾಜ್ಯದಲ್ಲಿ ಕೆಲ ತಿಂಗಳ ಕಾಲ ಗೊಂದಲ ಸೃಷ್ಟಿಯಾಗುತ್ತದೆ ಮತ್ತು ಆಡಳಿತವೂ ಉತ್ತಮವಾಗಿ ನಡೆಯುವುದಿಲ್ಲ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು