ಸಂತೇಮರಹಳ್ಳಿ: ಸಮೀಪದ ಯಲಕ್ಕೂರು ಗ್ರಾಮದಲ್ಲಿರುವ ಸರ್ಕಾರಿ ಜಾಗವನ್ನು ತಹಶೀಲ್ದಾರ್ ಎಂ.ಗಿರಿಜಾ ಅವರ ನೇತೃತ್ವದಲ್ಲಿ ಸರ್ವೆ ನಡೆಸಿ ಜಾಗ ಗುರುತಿಸಲಾಯಿತು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಗ್ರಾಮದಲ್ಲಿ 4 ಎಕರೆ ಸರ್ಕಾರಿ ಜಾಗದಲ್ಲಿ 1 ಎಕರೆ ಜಾಗವನ್ನು ಜಿಲ್ಲಾಡಳಿತದಿಂದ ಸ್ಮಶಾನಕ್ಕೆ ಮಂಜೂರು ಮಾಡಲಾಗಿದೆ. ಇನ್ನುಳಿದ 4 ಎಕರೆ ಜಮೀನಿನಲ್ಲಿ ಕೆಲವು ಖಾಸಗಿ ವ್ಯಕ್ತಿಗಳು ಅಕ್ಕ ಪಕ್ಕದಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ. ಈ ಸಂಬಂಧವಾಗಿ ಜಾಗವನ್ನು ಸರ್ವೆ ಮಾಡಿ ಜಾಗ ಗುರುತಿಸಿಕೊಡಬೇಕೆಂದು ಸರ್ವೆ ಇಲಾಖೆಗೆ ಗ್ರಾಮಸ್ಥರು ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ, ಸರ್ವೆ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ, ಗ್ರಾಮಸ್ಥರ ಸಮ್ಮುಖದಲ್ಲಿ ಸರ್ಕಾರದ 5 ಎಕರೆ ಜಾಗವನ್ನು ಸರ್ವೆ ನಡೆಸಿ ಗುರುತಿಸಲಾಗಿದೆ’ ಎಂದು ತಿಳಿಸಿದರು.

ಯಜಮಾನ ಸೋಮಶೇಖರ್ ಮಾತನಾಡಿ, ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಮಾಡಲು ಸ್ಥಳದ ಅಭಾವವಿರುವ ಹಿನ್ನೆಲೆಯಲ್ಲಿ ಒಂದು ಎಕರೆ ಜಾಗವನ್ನು ಭವನ ನಿರ್ಮಿಸಲು ಮಂಜೂರು ಮಾಡಿಕೊಡಬೇಕೆಂದು ಮನವಿ ಮಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು ಒಂದು ಎಕರೆ ಜಾಗವನ್ನು ಪ್ರತ್ಯೇಕವಾಗಿ ಕೂಡಲೇ ಮಂಜೂರು ಮಾಡಿ ಗ್ರಾಮ ಪಂಚಾಯಿತಿಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ಗಿರಿಜಾ ತಿಳಿಸಿದರು.

ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ರಾಜಶೇಖರ್ಮೂರ್ತಿ, ಸರ್ವೆ ಅಧಿಕಾರಿ ರಮೇಶ್, ಗ್ರಾಮ ಆಡಳಿತಾಧಿಕಾರಿ ಚಂದನ್, ಗ್ರಾಮ ಪಂಚಾಯಿರಿ ಅಭಿವೃದ್ಧಿ ಅಧಿಕಾರಿ ಗೋವಿಂದಯ್ಯ, ಎಎಸ್ಐ ಮಹದೇವಪ್ಪ, ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜು, ಯಜಮಾನರಾದ ಸಿದ್ದರಾಜು, ಬಸವಣ್ಣ, ಚಂದ್ರು, ಸೇರಿದಂತೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.