ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಯುವಕನ ಬಂಧನ

Last Updated 25 ಜನವರಿ 2021, 12:00 IST
ಅಕ್ಷರ ಗಾತ್ರ

ಕೊಳ್ಳೇಗಾಲ: 17 ವರ್ಷದ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಬೆಂಗಳೂರಿನ ಯುವಕನನ್ನು ಗ್ರಾಮಾಂತರ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ನಿವಾಸಿ ದೇವರಾಜುಡು (22) ಬಂಧಿತ ಆರೋಪಿ.

ಬಾಲಕಿಯ ತಂದೆ ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಇದೇ14 ರಂದು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸಬ್ ಇನ್‍ಸ್ಪೆಕ್ಟರ್ ಅಶೋಕ್ ನೇತೃತ್ವದ ತಂಡ ತನಿಖೆ ನಡೆಸಿದಾಗ ದೇವರಾಜುಡು ಬಾಲಕಿಯನ್ನು ಕರೆದೊಯ್ದಿರುವ ಮಾಹಿತಿ ಸಿಕ್ಕಿತು. ಆರೋಪಿಯ ಮೊಬೈಲ್‌ ಕರೆಗಳು ಹಾಗೂ ಲೊಕೇಷನ್‌ ಜಾಡನ್ನು ಬೆನ್ನು ಹತ್ತಿದ ಪೊಲೀಸರು, ಬೆಂಗಳೂರಿನಲ್ಲಿರುವುದನ್ನು ಪತ್ತೆ ಮಾಡಿದ್ದಾರೆ.

‘ಬಾಲಕಿಯು ಊರಿನಲ್ಲಿ ತಂದೆಯೊಂದಿಗೆ ಇದ್ದಳು. ತಾಯಿಯು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ತಾಯಿಯನ್ನು ನೋಡಲು ಆಗಾಗ ಬಾಲಕಿಯು ಬೆಂಗಳೂರಿಗೆ ಬಂದು ಹೋಗುತ್ತಿದೆ. ಈ ಸಂದರ್ಭದಲ್ಲಿ ಆಕೆಗೆ ದೇವರಾಜುಡು ಪರಿಚಯವಾಗಿತ್ತು. ಮೂರು ವರ್ಷಗಳಿಂದ ಇಬ್ಬರೂ ಪ್ರೀತಿಸುತ್ತಿದ್ದ ಎಂಬ ಸಂಗತಿ ವಿಚಾರಣೆಯಲ್ಲಿ ತಿಳಿದು ಬಂದಿದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ. ಹಾಗಾಗಿ, ಆರೋಪಿ ವಿರುದ್ಧ ಅಪಹರಣ ಹಾಗೂ ಪೊಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT