ಬುಧವಾರ, ಮೇ 25, 2022
26 °C

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ದೇವಾಲಯದ ಅರ್ಚಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪದಲ್ಲಿ ದೇವಾಲಯದ ಅರ್ಚಕರೊಬ್ಬರನ್ನು ಪೊಲೀಸರು ತಾಲ್ಲೂಕಿನ ಬೇಡಗುಳಿಯಲ್ಲಿ ಬಂಧಿಸಿದ್ದಾರೆ. 

17 ವರ್ಷ ವಯಸ್ಸಿನ ಬಾಲಕಿಯು ಈಗ ಏಳು ತಿಂಗಳ ಗರ್ಭಿಣಿಯಾಗಿದ್ದು, ಆಕೆಯನ್ನು ಸದ್ಯ ಬಾಲಮಂದಿರದಲ್ಲಿ ಇರಿಸಲಾಗಿದೆ. 

ದೇವಾಲಯವೊಂದರಲ್ಲಿ ಅರ್ಚಕರಾಗಿದ್ದ ರವಿ (23) ಬಂಧಿತ ಆರೋಪಿ. ಅವರು ಮೂರು ವರ್ಷಗಳಿಂದ ಬಾಲಕಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.   

’ಕೋವಿಡ್ ಸಂಬಂಧ ಗ್ರಾಮದಲ್ಲಿ ಪಂಚಾಯಿತಿ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸುತ್ತಿದ್ದಾಗ ಬಾಲಕಿಯನ್ನು ಕಂಡು ಅನುಮಾನಗೊಂಡು ವಿಚಾರಿಸಿದಾಗ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಮತ್ತಷ್ಟು ಪ್ರಶ್ನಿಸಿದಾಗ ನಡೆದಿರುವುದನ್ನು ತಿಳಿಸಿದ್ದಾಳೆ‘ ಎಂದು ಅವರು ಮಾಹಿತಿ ನೀಡಿದ್ದಾರೆ.  

’ಬಾಲಕಿಯ ತಾಯಿ ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಆರೋಪಿಯನ್ನು ಪೋಕ್ಸೊ ಕಾಯ್ದೆ ಅಡಿಯಲ್ಲಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಲಾಗಿದೆ‘ ಎಂದು ಚಾಮರಾಜನಗರ ಮಹಿಳಾ ಠಾಣೆ ಇನ್‌ಸ್ಪೆಕ್ಟರ್‌ ಪುಟ್ಟಸ್ವಾಮಿ ಅವರು ’ಪ್ರಜಾವಾಣಿ‘ಗೆ ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು