ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಯುವ ಕಾಂಗ್ರೆಸ್ ಪ್ರತಿಭಟನೆ

ಚಾಮರಾಜನಗರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಸತ್ತಿರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಮುಂದೆ ಸೇರಿದ ಪ್ರತಿಭಟನಕಾರರು, ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಅಜೀಜ್ ಅವರು ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪದೇ ಪದೇ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡುವ ಜನಸಾಮಾನ್ಯರ ಮೇಲೆ ಹೊರೆ ಹೇರುತ್ತಿದ್ದಾರೆ. ಈ ಸರ್ಕಾರಗಳಿಗೆ ಜನ ಪರ, ಬಡವರ ಯಾವುದೇ ಕಾಳಜಿಯಿಲ್ಲ. ಅದಾನಿ, ಅಂಬಾನಿಯಂತಹ ದೊಡ್ಡ ದೊಡ್ಡ ಉದ್ಯಮಿಗಳ ಪರವಾಗಿದ್ದು ಅವರಿಗೆ ಅನುಕೂಲ ಮಾಡುವ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.
2014ರಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಲೀಟರ್ಗೆ ₹9 ತೆರಿಗೆ ಇತ್ತು. ನರೇಂದ್ರಮೋದಿ ಸರ್ಕಾರ ₹32.5 ತೆರಿಗೆ ವಿಧಿಸುತ್ತಿದೆ. ಕೋವಿಡ್ನಿಂದಾಗಿ ಜನರು ತುಂಬಾ ಸಂಕಷ್ಟದಲ್ಲಿದ್ದಾರೆ ಎಂದು ಆರ್ಬಿಐ ಗವರ್ನರ್ ಅವರು ತೆರಿಗೆ ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಆದರೂ ಮೋದಿ ಸರ್ಕಾರ ತೆರಿಗೆ ಕಡಿತ ಮಾಡಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನರ ಜೀವನೊಂದಿಗೆ ಚೆಲ್ಲಾಟ ಆಡುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸ್ಗರ್, ಪತ್ರಿಕಾ ಕಾರ್ಯದರ್ಶಿ ಅರುಣ್ ಕುಮಾರ್, ಮುಖಂಡರಾದ ಎ.ಎಚ್.ನಸ್ರುಲ್ಲಾಖಾನ್, ಖುರಾಂ?ರೀಫ್, ಸೈಯದ್ ತೌಸೀಫ್, ನವೀನ್ ಹೊಂಗನೂರು, ಮಧು ಹೆಬ್ಬಸೂರು, ಇತರರು ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.