ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ: ಜಲಾಶಯದ ನೀರಿನಲ್ಲಿ ಮುಳುಗಿ ಯುವಕ ಸಾವು

Published 23 ನವೆಂಬರ್ 2023, 14:46 IST
Last Updated 23 ನವೆಂಬರ್ 2023, 14:46 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಗ್ರಾಮದ ಬಳಿ ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ ಯುವಕ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಬಸವಾಪುರ ಗ್ರಾಮದ ಮಹೇಶ್(20) ಮೃತ ಯುವಕ. ಈತನ ಶವ ಶಿವಪುರ ಗ್ರಾಮದ ಬಳಿಯ ಕಲ್ಲುಕಟ್ಟೆ ಜಲಾಶಯದಲ್ಲಿ ತೇಲುತ್ತಿದ್ದ ವೇಳೆ ಸ್ಥಳೀಯರು ಗಮನಿಸಿ, ನಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಅಗ್ನಿಶಾಮಕ ದಳದವರನ್ನು ಸ್ಥಳಕ್ಕೆ ಬರಮಾಡಿಕೊಂಡು ಶವವನ್ನು ಜಲಾಶಯದಿಂದ ಮೇಲೆತ್ತಿದ್ದಾರೆ. ಈತ ಮಾನಸಿಕ ಅಶ್ವಸ್ಥನಾಗಿದ್ದ ಎನ್ನಲಾಗುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು. ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT