ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

Published 28 ಏಪ್ರಿಲ್ 2024, 4:23 IST
Last Updated 28 ಏಪ್ರಿಲ್ 2024, 4:23 IST
ಅಕ್ಷರ ಗಾತ್ರ

ಚಾಮರಾಜನಗರ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್‌, ವಿಶೇಷ ಪೋಕ್ಸೊ ನ್ಯಾಯಾಲಯ ಆದೇಶಿಸಿದೆ. 

ತಾಲ್ಲೂಕಿನ ವಡ್ಗಲ್‌ಪುರ ಗ್ರಾಮದ ನಾಗೇಂದ್ರ (22) ಶಿಕ್ಷೆಗೆ ಗುರಿಯಾದವನು. ಯುವಕನು ಬಾಲಕಿಯ ಮನೆಗೆ ನುಗ್ಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದ. 2021ರ ಜುಲೈ 20 ರಂದು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖಾಧಿಕಾರಿ ಬಿ. ಪುಟ್ಟಸ್ವಾಮಿ ನಾಗೇಂದ್ರನ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾಗಿರುವುದರಿಂದ  ನ್ಯಾಯಾಧೀಶರಾದ ಎನ್. ಆರ್. ಲೋಕಪ್ಪ ಅವರು ನಾಗೇಂದ್ರನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ, 35 ಸಾವಿರ ರೂ. ದಂಡ ವಿಧಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.

ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ತಿಂಗಳ ಒಳಗಾಗಿ ₹3 ಲಕ್ಷ ಪರಿಹಾರ ನೀಡಬೇಕು ಎಂದೂ ಅವರು ಆದೇಶದಲ್ಲಿ ಹೇಳಿದ್ದಾರೆ.

ಪ್ರಾಸಿಕ್ಯೂಷನ್‌ ಪರವಾಗಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೆ. ಯೋಗೇಶ್ ವಾದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT