ಶನಿವಾರ, ಮೇ 30, 2020
27 °C

ಲಾರಿ ಹರಿದು ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ನಗರದ ಡೀವಿಯೇಷನ್‌ ರಸ್ತೆಯಲ್ಲಿ ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದ್ದರಿಂದ, ಸವಾರರೊಬ್ಬರು ಶನಿವಾರ ಮೃತಪಟ್ಟಿದ್ದಾರೆ. 

ತಾಲ್ಲೂಕಿನ ಮಂಗಲ ಗ್ರಾಮದ ಬಸವರಾಜು ಎಂಬುವವರ ಮಗ ಪವನ್‌ಕುಮಾರ್‌ (19) ಮೃತಪಟ್ಟವರು.

ಪವನ್‌ ಕುಮಾರ್‌ ತಮ್ಮ ಪಲ್ಸರ್‌ ಬೈಕ್‌ನಲ್ಲಿ ಅಕ್ಕನನ್ನು ಜಿಲ್ಲಾಸ್ಪತ್ರೆಗೆ ಬಿಡಲು ಬಂದಿದ್ದರು. ಬಿಟ್ಟು ವಾಪಸ್‌ ಹೋಗುವಾಗ ಭುವನೇಶ್ವರಿ ವೃತ್ತ ಹಾಗೂ ಸಂತೇಮರಹಳ್ಳಿ ವೃತ್ತದ ನಡುವೆ ಬರುವ ತಿರುವಿನಲ್ಲಿ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆಯಿತು. ಕೆಳಗೆ ಬಿದ್ದ ಪವನ್‌ ಅವರ ಮೇಲೆ ಲಾರಿ ಹರಿಯಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅವರು ಬದುಕಿ ಉಳಿಯಲಿಲ್ಲ ಎಂದು ಸಂಚಾರ ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ರಾಜುನಾಯ್ಕ ‘ಪ್ರಜಾವಾಣಿ’ಗೆ ತಿಳಿಸಿದರು. 

ಚಾಲಕನನ್ನು ಬಂಧಿಸಿ, ಲಾರಿಯನ್ನು ಜಪ್ತಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣವರ್‌, ಡಿವೈಎಸ್‌ಪಿ ಜೆ.ಮೋಹನ್‌, ಪಟ್ಟಣ ಠಾಣೆ ಇನ್‌ಸ್ಪೆಕ್ಟರ್‌ ಎನ್‌.ಸಿ.ನಾಗೇಗೌಡ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು