ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟ: ಯುಗಾದಿ ಜಾತ್ರೆ ಸರಳ, ಭಕ್ತರಿಗೆ ಪ್ರವೇಶ ನಿರ್ಬಂಧ

ಏ.10ರಿಂದ 13ರವರೆಗೆ ಜಾತ್ರೆ 200 ಜನರಿಗೆ ಮಾತ್ರ ಅವಕಾಶ, ಭಕ್ತರಿಗೆ ಪ್ರವೇಶ ನಿರ್ಬಂಧ
Last Updated 4 ಏಪ್ರಿಲ್ 2021, 13:48 IST
ಅಕ್ಷರ ಗಾತ್ರ

ಚಾಮರಾಜನಗರ: ಕೋವಿಡ್‌ ಕಾರಣದಿಂದ ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಯುಗಾದಿ ಜಾತ್ರೆ ಈ ಬಾರಿ ಸರಳವಾಗಿ ನಡೆಯಲಿದೆ. ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇದೇ‌ 10ರಿಂದ 13ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಾತ್ರೆಯಲ್ಲಿ 200 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶ ಹೊಡಿಸಿದ್ದಾರೆ.

ಅರ್ಚಕರು, ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮಾತ್ರ ಜಾತ್ರೆಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗಿದೆ. ಕೋವಿಡ್‌ ತಡೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಥೋತ್ಸವ ರದ್ದು ಸಾಧ್ಯತೆ: ಯುಗಾದಿ ಜಾತ್ರೆಯ ಕೊನೆಯ ದಿನ ರಥೋತ್ಸವ ನಡೆಯುತ್ತದೆ. ತೇರನ್ನು ಎಳೆಯಲು 500ರಿಂದ 1000 ಭಕ್ತರು ಬೇಕು. 200 ಜನರಿಗೆ ಮಾತ್ರ ಅವಕಾಶ ಇರುವುದರಿಂದ ಈ ಬಾರಿಯೂ ರಥೋತ್ಸವ ರದ್ದಾಗುವ ಸಾಧ್ಯತೆ ಹೆಚ್ಚಿದೆ.

‘ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣಕ್ಕೆ 10ರಿಂದ 13ರವರೆಗೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸಾಂಪ್ರದಾಯಿಕ ವಿಧಿ ವಿಧಾನಗಳ ಮೂಲಕ ಜಾತ್ರೆ ನಡೆಸಲಾಗುವುದು. ರಥೋತ್ಸವದ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಜಿಲ್ಲಾಧಿಕಾರಿ ಅವರೊಂದಿಗೆ ಮತ್ತೆ ಚರ್ಚಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT