ಸೋಮವಾರ, ಮೇ 17, 2021
28 °C

ಮಹದೇಶ್ವರ ಬೆಟ್ಟ: ಶನಿವಾರದಿಂದ ಸರಳ ಯುಗಾದಿ ಜಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಹದೇಶ್ವರ ಬೆಟ್ಟ: ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಯುಗಾದಿ ಜಾತ್ರೆ ಶನಿವಾರದಿಂದ (ಏ.10) ಆರಂಭವಾಗಲಿದ್ದು, ಕೋವಿಡ್‌ ಕಾರಣಕ್ಕೆ ಸರಳವಾಗಿ ನಡೆಯಲಿದೆ. 

ಅರ್ಚಕರು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಸೇರಿದಂತೆ 200 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. 

ನಾಲ್ಕು ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ ಕರ್ನಾಟಕವಲ್ಲದೆ ತಮಿಳುನಾಡಿನ ಲಕ್ಷಾಂತರ ಭಕ್ತರು ಪ್ರತಿ ವರ್ಷ ಪಾಲ್ಗೊಳ್ಳುತ್ತಾರೆ. ಕಳೆದ ವರ್ಷವೂ ಜಾತ್ರೆ ರದ್ದಾಗಿತ್ತು. 

ಶನಿವಾರ ಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನದ ಸೇವೆ, ಭಾನುವಾರ ಅಮಾವಾಸ್ಯೆ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿದೆ.

ಕೊನೆಯ ದಿನ ರಥೋತ್ಸವದ ಮೂಲಕ ಜಾತ್ರೆಗೆ ತೆರೆ ಬೀಳುವುದು ವಾಡಿಕೆ. ಅದರ ಪ್ರಕಾರ ಮಂಗಳವಾರ (ಏ.13) ರಥೋತ್ಸವ ಬರುತ್ತದೆ. ಭಕ್ತರ ಸಂಖ್ಯೆ ಕಡಿಮೆ ಇರುವುದರಿಂದ ರತೋತ್ಸವ ನಡೆಯುತ್ತದೆಯೇ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ದೇವಾಲಯದ ಎದುರು ರಥವನ್ನು ತಂದು ನಿಲ್ಲಿಸಲಾಗಿದೆ.  

ಈ ಬಗ್ಗೆ ಶನಿವಾರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.