ಚಾಮರಾಜನಗರ: ನಗರದ ಚಾಮರಾಜೇಶ್ವರ ಉದ್ಯಾನದ ಮುಂಭಾಗ ಬುಧವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ಪಕೋಡ, ಚಹಾ ಹಾಗೂ ತರಕಾರಿ ಮಾರಾಟ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಜನ್ಮದಿನವನ್ನು ವ್ಯಂಗ್ಯವಾಗಿ ಆಚರಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಯೋಗೇಂದ್ರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಜನ್ಮದಿನಬವನ್ನು ಕಾಂಗ್ರೆಸ್ ದೇಶದಾದ್ಯಂತ ರಾಷ್ಟ್ರೀಯ ನಿರುದ್ಯೋಗ ದಿನಾಚರಣೆಯಾಗಿ ಆಚರಣೆ ಮಾಡುತ್ತಿದೆ. ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದು 11 ವರ್ಷಗಳು ಕಳೆದರೂ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿಲ್ಲ. ಚುನಾವಣೆಗೂ ಮುನ್ನ ಬಿಜೆಪಿ ನೀಡಿದ್ದ ಉದ್ಯೋಗ ಸೃಷ್ಟಿಸುವ ಭರವಸೆ ಈಡೇರಿಲ್ಲ ಎಂದರು.

ಯುವಕರು ಉದ್ಯೋಗ ಸಿಗದೆ ಸಮಸ್ಯೆ ಅನುಭವಿಸುತಿದ್ದಾರೆ. ನೋಟ್ ಬ್ಯಾನ್, ಜಿಎಸ್ಟಿ ಏರಿಕೆ, ನಿರುದ್ಯೋಗ ಮೋದಿ ಅವರ ಸಾಧನೆಯಾಗಿದೆ. ಉದ್ಯೋಗ ಸಿಗದೆ ಗ್ರಾಮೀಣ ಭಾಗದಲ್ಲಿ ಯುವಕರು ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಮಾಡುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಖಾತ್ರಿ ಯೋಜನೆಗೆ ಅನುದಾನ ಬಿಡುಗಡೆ ಮಾಡದೆ ಬಡವರಿಗೆ ಅನ್ಯಾಯ ಎಸಗಿದೆ. ಕೇಂದ್ರ ಸರ್ಕಾರ ನಿರುದ್ಯೋಗ ಸಮಸ್ಯೆ ಬಗೆಹರಿಸದಿದ್ದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡಲಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಸೈಯದ್ ಇಸ್ಮಾಯಿಲ್, ಚಂದನಾ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ನಾಗೇಂದ್ರ, ಮುಖಂಡರಾದ ಅಕ್ಷಯ್, ದರ್ಶನ, ನೂರ್ ಅಹಮದ್, ಆನಂತ್, ಶ್ರೀನಿವಾಸ್, ಉಸ್ಮಾನ್, ಸಂಜಯ್, ವಿಶ್ವ, ನಂಜುಂಡ, ಸಚಿನ್ ಸೇರಿದಂತೆ ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.