ಭಾನುವಾರ, ಜುಲೈ 25, 2021
22 °C

ಚಾಮರಾಜನಗರ ಜಿ.ಪಂ.ಉಪಾಧ್ಯಕ್ಷ ಕೆ.ಎಸ್‌.ಮಹೇಶ್‌ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಕೆ.ಎಸ್‌.ಮಹೇಶ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಪಕ್ಷದಲ್ಲಿ ನಡೆದಿರುವ ಆಂತರಿಕ ಒಪ್ಪಂದಂತೆ ಅವರು ಪದತ್ಯಾಗ ಮಾಡಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎಂ.ಅಶ್ವಿನಿ ಅವರಿಗೆ ಗುರುವಾರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. 

23 ಸದಸ್ಯ ಬಲದ ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್‌ 14 ಸ್ಥಾನಗಳನ್ನು ಹೊಂದಿದ್ದು, ಸ್ಪಷ್ಟ ಬಹುಮತ ಪಡೆದಿದೆ. ಸದಸಸ್ಯರ ನಡುವೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಇದ್ದುದರಿಂದ ಪಕ್ಷದ ಮುಖಂಡರು, ಪರಿಶಿಷ್ಟ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನವನ್ನು ಮೂವರಿಗೆ ತಲಾ 20 ತಿಂಗಳಂತೆ ಹಾಗೂ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನವನ್ನು ನಾಲ್ವರಿಗೆ ಹಂಚಿಕೆ ಮಾಡಿದ್ದರು. ಅದರಂತೆ ಈ ಹಿಂದೆ ಬಸವರಾಜು ಮತ್ತು ಯೋಗೇಶ್‌ ಆಗಿದ್ದರು.

ಕೆ.ಎಸ್‌.ಮಹೇಶ್‌ ಅವರು 2019ರ ಜೂನ್‌ನಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. 11 ತಿಂಗಳ ಅಧಿಕಾರವಧಿ ಪೂರ್ಣಗೊಂಡ ನಂತರ ರಾಜೀನಾಮೆ ನೀಡಿದ್ದಾರೆ. ಆಂತರಿಕ ಒಪ್ಪಂದದಂತೆ ಮುಂದಿನ ಅವಧಿಗೆ ಶಶಿಕಲಾ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. 

ಈ ಜಿಲ್ಲಾ ಪಂಚಾಯಿತಿಯ ಅವಧಿ 2021ರ ಏಪ್ರಿಲ್‌ 30ರವೆಗೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.