ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡುಗೆ ನೌಕರರು, ಕಾವಲುಗಾರರ ಹುದ್ದೆ ನೇಮಕಾತಿಗೆ ತಡೆಯಾಜ್ಞೆ

Last Updated 22 ಜುಲೈ 2017, 9:46 IST
ಅಕ್ಷರ ಗಾತ್ರ

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಅಡುಗೆ ನೌಕರರು, ಸಹಾಯಕರು ಮತ್ತು ರಾತ್ರಿ ಕಾವಲುಗಾರರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಮರಾಜನಗರ ಜಿಲ್ಲಾ ವ್ಯಾಪ್ತಿಗೆ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
ನೇಮಕಾತಿ ಪ್ರಕ್ರಿಯೆ ಪ್ರಶ್ನಿಸಿ ಜಿಲ್ಲೆಯ ಹೊರಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಹೈಕೋರ್ಟ್‌ ಮೊರೆ ಹೋಗಿದ್ದರು.

ಇಲಾಖೆಯಲ್ಲಿ 8-10 ವರ್ಷಗಳಿಂದ 53 ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದು, ತಮ್ಮನ್ನು ಕಾಯಂಗೊಳಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್.ಚೌಹಾಣ್ ಅವರ ಏಕಸದಸ್ಯ ಪೀಠ ಸದರಿ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದೆ.

ಮುಂದಿನ ಆದೇಶದವರೆಗೂ ಎಲ್ಲ 53 ಸಿಬ್ಬಂದಿಯನ್ನು ಯಥಾಸ್ಥಿತಿಯಲ್ಲಿ ಮುಂದುವರೆ ಸಲು ಸೂಚಿಸಿದೆ ಎಂದು ಜಿಲ್ಲಾ ಹೊರಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಪಿ. ಮಹೇಶ್ ತಿಳಿಸಿದ್ದಾರೆ. ಈ ಸಂಬಂಧ ನ್ಯಾಯಾಲಯಕ್ಕೆ ದಾಖಲಾತಿ ಸಲ್ಲಿಸಲು ಇಚ್ಛಿಸುವ ಹೊರಗುತ್ತಿಗೆ ಸಿಬ್ಬಂದಿ 91417 37308, 78298 80578 ಮೊಬೈಲ್ ಸಂಖ್ಯೆ ಸಂಪರ್ಕಿಸ ಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT