ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನುಗಳಿದ್ದರೂ ಹಕ್ಕುಗಳ ಉಲ್ಲಂಘನೆ: ಬಿ.ಬಿ.ಕಾವೇರಿ ಕಳವಳ

ವಿಶ್ವ ಮಾನವ ಹಕ್ಕುಗಳ ದಿನಾಚರಣೆ
Last Updated 10 ಡಿಸೆಂಬರ್ 2018, 15:38 IST
ಅಕ್ಷರ ಗಾತ್ರ

ಚಾಮರಾಜನಗರ: ‘ಮಾನವ ಹಕ್ಕುಗಳ ರಕ್ಷ ಣೆಗೆ ಹಲವುಕಾಯಿದೆ ಕಾನೂನುಗಳು ರಚನೆಯಾಗಿದ್ದರೂಅವುಗಳ ಉಲ್ಲಂಘನೆ ಮುಂದುವರಿದಿದೆ’ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿಕಳವಳವ್ಯಕ್ತಪಡಿಸಿದರು.

ನಗರದ ಜೆಎಚ್‌ ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಅವರುಮಾತನಾಡಿದರು.

ಶೋಷಿತ ಸಮುದಾಯದವರ ಹಕ್ಕುಗಳಿಗಾಗಿ ಡಾ.ಬಿ.ಆರ್.ಅಂಬೇಡ್ಕರ್‌, ದಕ್ಷಿಣಾ ಆಫ್ರಿಕದ ರಾಷ್ಟ್ರಪತಿಯಾಗಿದ್ದ ನೆಲ್ಸನ್‌ ಮಂಡೆಲಾ ಅವರು ತಮ್ಮ ಟಂಬೂ ಬುಡಕಟ್ಟು ಜನರ ಹಕ್ಕುಗಳಿಗಾಗಿ ನಿರಂತರ ಧನಿ ಎತ್ತಿದರು. ಇಂತಹ ಅನೇಕಸಾಮಾಜ ಸುಧಾರಕರು ಜನರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದಾರೆ ಎಂದು ಹೇಳಿದರು.

ಸಂವಿಧಾನಬದ್ಧವಾಗಿ ಪ್ರತಿಯೊಬ್ಬರಿಗೂ ನೀಡಲಾಗಿರುವ ಸ್ವಾತಂತ್ರ್ಯ ಹಕ್ಕುಗಳು, ರಕ್ಷಣೆ ಮಾಡುವುದು ಪ್ರಮುಖ ಕರ್ತವ್ಯವಾಗಿದೆ. ಲಿಂಗ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನತೆಯ ಹಕ್ಕು ನೀಡಲಾಗಿದೆ. ಶಿಕ್ಷಣ, ಆರೋಗ್ಯ, ವಾಕ್ ಸ್ವಾತಂತ್ರ್ಯ ಸೇರಿದಂತೆ ಹಲವು ಹಕ್ಕುಗಳು ಲಭಿಸಿದೆ.

ಬಾಲಕಾರ್ಮಿಕ, ಜೀತಪದ್ಧತಿಯೂ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಇವುಗಳನ್ನು ತಡೆಯಲು ಸಂಬಂಧಪಟ್ಟ ಇಲಾಖೆಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಹಕ್ಕುಗಳ ರಕ್ಷಣೆ, ಅದರ ಪ್ರಾಮುಖ್ಯತೆ ಕುರಿತು ಸರ್ಕಾರೇತರ ಸ್ವಯಂಸೇವಾ ಸಂಸ್ಥೆಗಳು ಸಹ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದರು.

ರಾಜ್ಯಶಾಸ್ತ್ರ ಉಪನ್ಯಾಸಕಿಶಕುಂತಲ ಮಾತನಾಡಿ, ’ಸಮಾಜದಲ್ಲಿ ಘನತೆ ಗೌರವದಿಂದ ಬದುಕುವುದು ಪ್ರತಿಯೊಬ್ಬರ ಹಕ್ಕು.ಮತ್ತೊಬ್ಬರಹಕ್ಕುಗಳಿಗೆ ಚ್ಯುತಿ ಬಾರದಂತೆ ಎಚ್ಚರಿಕೆ ವಹಿಸುವುದು ಕೂಡ ಪ್ರತಿಯೊಬ್ಬರ ಕರ್ತವ್ಯ. ಪ್ರತಿ ವ್ಯಕ್ತಿಗೂ ಸಾಮಾಜಿಕ, ರಾಜಕೀಯ, ಆರ್ಥಿಕವಾಗಿ ಮುಂದುವರಿಯಲು ಅವಕಾಶಗಳನ್ನುನೀಡುವ ಮೂಲಕಹಕ್ಕುಗಳನ್ನು ನೀಡಲಾಗಿದೆ’ ಎಂದರು.

ವಿಶ್ವ ಸಂಸ್ಥೆಯು 1948ರಲ್ಲಿ ಮಾನವ ಹಕ್ಕುಗಳ ಘೋಷಣೆ ಮಾಡಿತು. ದೇಶದಲ್ಲಿ 1993ರಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಚಿಸಲಾಯಿತು. ರಾಜ್ಯದಲ್ಲಿ 2007ರಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ ಅಸ್ತಿತ್ವಕ್ಕೆ ಬಂದಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಅಧಿಕಾರಿ ಡಾ.ಕೆ.ಹರೀಶ್ ಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್‌ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ, ಜಂಟಿ ಕೃಷಿ ನಿರ್ದೇಶಕ ಡಾ.ಎಂ.ತಿರುಮಲೇಶ್ಇದ್ದರು.

ಪೊಲೀಸ್‌ ಹಾಗೂ ನ್ಯಾಯಾಂಗ ಇಲಾಖೆ ಮಹತ್ತರ ಪಾತ್ರ

‘ಮಾನವ ಹಕ್ಕುಗಳ ರಕ್ಷಣೆಯಲ್ಲಿ ಪೊಲೀಸ್‌ ಇಲಾಖೆ ಮತ್ತು ನ್ಯಾಯಾಂಗ ಇಲಾಖೆ ಪ್ರಮುಖ ಪಾತ್ರ ವಹಿಸಬೇಕು. ಜನರ ರಕ್ಷಣೆಗೆ ಪೊಲೀಸ್‌ ಇಲಾಖೆ ಇದೆ. ಅದರಂತೆ ನ್ಯಾಯಯುತ ಬೇಡಿಕೆ ಈಡೇರಿಸಲು ನ್ಯಾಯಾಂಗ ಇಲಾಖೆ ಇದೆ. ಇವೆರಡೂ ಇಲಾಖೆಗಳಿಂದಲೂ ಮಾನವ ಹಕ್ಕುಗಳ ರಕ್ಷಣೆ ಸಾಧ್ಯ’ ಎಂದು ಬಿ.ಬಿ.ಕಾವೇರಿ ಹೇಳಿದರು.

*‘ಮಾನವ ಹಕ್ಕುಗಳ ಮಹತ್ವದ ಬಗ್ಗೆ ಪರಿಣಾಮಕಾರಿಯಾಗಿ ಅನಕ್ಷರಸ್ಥರಲ್ಲಿ ಹೆಚ್ಚಿನ ಅರಿವು ಮೂಡಿಸಿದರೆ ಮಾನವ ಹಕ್ಕುಗಳ ಉಲ್ಲಂಘನೆ ತಡೆಗಟ್ಟಬಹುದು’

ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT