ಸಂತೇಮರಹಳ್ಳಿ: ಪ್ರಸ್ತಕ ಶೈಕ್ಷಣಿಕ ವರ್ಷ ಆರಂಭವಾಗಿ ವಾರ ಕಳೆದಿದ್ದರೂ ಉಮ್ಮತ್ತೂರು ಮತ್ತು ಜನ್ನೂರು ಮಾರ್ಗ ಮಧ್ಯೆದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಇನ್ನು ತೆರೆದಿಲ್ಲ. ಶೈಕ್ಷಣಿಕ ವರ್ಷ ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಪಾಠಪ್ರವಚನಗಳಿಂದ ವಂಚಿಸಲಾಗಿದೆ.

ಇಲ್ಲಿ 6ರಿಂದ 10ನೇ ತರಗತಿವರೆಗೆ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಯಳಂದೂರು ತಾಲ್ಲೂಕಿಗೆ ಸೇರಿದ ಗ್ರಾಮಗಳ 200 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆ ಆರಂಭದ ದಿನ ಮಕ್ಕಳು ಬೇಸಿಗೆ ರಜೆ ಮುಗಿಸಿಕೊಂಡು ವಸತಿ ಶಾಲೆಗೆ ಆಗಮಿಸಿದ್ದರೂ ಪಾಠಪ್ರವಚನ ಆರಂಭಿಸಿಲ್ಲ. ಊಟ, ತಿಂಡಿ ವ್ಯವಸ್ಥೆ ಇಲ್ಲದ ಪರಿಣಾಮ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ಮರಳಿದ್ದಾರೆ. ವಸತಿನಿಲಯದಲ್ಲಿ ಯಾರೂ ಇಲ್ಲದಿರುವುದರಿಂದ ಗೇಟ್ ಮತ್ತು ಬಾಗಿಲಿಗೆ ಬೀಗ ಜಡಿಯಲಾಗಿದೆ.

ಮೇಲ್ವಿಚಾರಕರನ್ನು ಖಾಯಂ ಆಗಿ ನೇಮಿಸದ ಕಾರಣ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಸತಿ ಶಾಲೆ ಆರಂಭದ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದಂತಾಗಿದೆ. ಇದರಿಂದ ಆಗಾಗ್ಗೆ ವಿದ್ಯಾರ್ಥಿಗಳು ವಸತಿ ಶಾಲೆಗೆ ಎಡತಾಕುವಂತಾಗಿದೆ.
ಶೀಘ್ರ ವಸತಿಶಾಲೆ ಆರಂಭಿಸಬೇಕು ಎಂಬುದು ಪೋಷಕರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.