ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪರ್ಧೆ ಎದುರಿಸಲು ಸಜ್ಜಾಗಲು ಸಲಹೆ

ಬಹುಜನ ವಿದ್ಯಾರ್ಥಿ ಸಂಘದಿಂದ ಪ್ರತಿಭಾ ಪುರಸ್ಕಾರ
Last Updated 10 ಜುಲೈ 2017, 7:12 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ‘ಜಾಗತೀಕರಣ ಪ್ರಭಾವ ಹೆಚ್ಚಾದಂತೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಗಳು ಕಡಿತಗೊಳ್ಳುತ್ತವೆ’ ಎಂದು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧಕ ಡಾ.ಶಿವಕುಮಾರ್‌ ತಿಳಿಸಿದರು.

ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜನ್ಮದಿನ ಅಂಗವಾಗಿ  ಬಹುಜನ ವಿದ್ಯಾರ್ಥಿ ಸಂಘ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಎನ್‌.ಮಹೇಶ್‌ ಅವರು, ಸ್ಪರ್ಧೆಯ ಹಿನ್ನೆಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಆಂಗ್ಲಭಾಷೆ, ಕಂಪ್ಯೂಟರ್‌ ಶಿಕ್ಷಣದಲ್ಲಿಯೂ ಪರಿಣಿತಿ ಪಡೆಯಬೇಕು ಎಂದು ಸಲಹೆ ಮಾಡಿದರು

ಕುದೇರು ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಗಂಗಾಧರ್‌, ಸಮಾನತೆಯ ಸಮಾಜ ನಿರ್ಮಿಸಲು ವಿದ್ಯಾರ್ಥಿಗಳು ಹೋರಾಡಬೇಕಿದೆ ಎಂದು ತಿಳಿಸಿದರು.

ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಜೇತವನ ಬುದರ್ಧದ್ದವಿಹಾರದ ಸುಗತಪಾಲ ಬಂತೇಜಿ, ಅಯ್ಯನಮಠ ಚಿನ್ನಸ್ವಾಮಿ, ಗ್ರಾಮಪಂಚಾಯಿತಿ ಸದಸ್ಯರಾದ ಜಯಶಂಕರ್‌, ಎಂ.ಪಿ. ಶಂಕರ್‌, ಮುಖಂಡರಾದ ಬಾಗಳಿ ರೇವಣ್ಣ, ಡಿ.ಎನ್‌. ನಟರಾಜು, ರೈತಸಂಘದ ಡಾ.ಗುರುಪ್ರಸಾದ್‌, ಚನ್ನಬಸವಯ್ಯ, ಹಳ್ಳಿಕೆರೆ ಹುಂಡಿ ಭಾಗ್ಯರಾಜ್‌, ಕಲಾವಿದ ಬಸವರಾಜು, ಮಹೇಶ್‌, ಬಿವಿಎಸ್‌ ಜಿಲ್ಲಾ ಸಂಚಾಲಕ ಪರ್ವತರಾಜು ಹಾಗೂ ವಿವಿಧ ಪದಾಧಿಕಾರಿಗಳು ಮತ್ತು ಪೋಷಕರು ಹಾಜರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT