ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಗ್ರಹ

Last Updated 31 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಮಹಿಳಾ ಕಾಂಗ್ರೆಸ್‌ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಚುನಾವಣಾ ಅಕ್ರಮ ಎಸಗುವುದರಲ್ಲಿ ನಿಸ್ಸೀಮರು’ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಕ್ಷ್ಮೀ ಹೆಬ್ಬಾಳ್ಕರ್‌, ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ವೇಳೆ ಬಹಿರಂಗವಾಗಿ ಹಣ ಹಂಚಿದ್ದರು. ಈಗ ಲಾರಿಗಳಲ್ಲಿ ಕುಕ್ಕರ್‌ಗಳನ್ನು ತಂದು ಹಂಚುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬೇಕು. ಅವರು ಚುನಾವಣೆಗೆ ನಿಲ್ಲದಂತೆ ಆದೇಶ ‌ಮಾಡಬೇಕು’ ಎಂದು ಆಗ್ರಹಿಸಿದರು.

ತಿರುಗೇಟು: ‘ಬಿಜೆಪಿ ಪಕ್ಷಾಂತರಿಗಳ ಪಕ್ಷ’ ಎಂಬ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆಗೆ ತಿರುಗೇಟು ನೀಡಿ, ‘ರಾಮಲಿಂಗಾ ರೆಡ್ಡಿಯವರು ಇದನ್ನು ಸಿದ್ದರಾಮಯ್ಯ ಅವರಿಗೆ ಹೇಳಿದ ಹಾಗಿದೆ’ ಎಂದರು.

‘ಆನಂದ್ ಸಿಂಗ್, ನಾಗೇಂದ್ರ ಯಾವ ಪಕ್ಷದವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನಲ್ಲಿರುವ ಬಹುತೇಕ ಸಚಿವರು ಯಾವ ಪಕ್ಷದವರು ಎನ್ನುವುದನ್ನು ಅರಿತು ಮಾತನಾಡಲಿ’ ಎಂದು ಶೋಭಾ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT