ನಗರದಲ್ಲಿ ಮಳೆ ಸಿಂಚನ

7

ನಗರದಲ್ಲಿ ಮಳೆ ಸಿಂಚನ

Published:
Updated:
Deccan Herald

ಚಾಮರಾಜನಗರ: ನಗರದಲ್ಲಿ ಶುಕ್ರವಾರ ಸುರಿದ ಮಳೆಯಿಂದಾಗಿ ಇಳೆಗೆ ತಂಪೆರೆಯಿತು.

ನಗರದಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ 2ರ ಸುಮಾರಿಗೆ ತುಂತುರು ಹನಿಗಳಿಂದ ಆರಂಭವಾದ ಮಳೆ, ಆನಂತರ ಬಿರುಸಾಗಿ ಸುರಿಯಿತು.

ಮಳೆ ಬೀಳುವ ಸೂಚನೆ ಸಿಗುತ್ತಿದ್ದಂತೆ ಸಾರ್ವಜನಿಕರು ಸಮೀಪದ ಅಂಗಡಿ– ಮಳಿಗೆಗಳನ್ನು ಆಶ್ರಯಿಸಿದರು. ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಭುವನೇಶ್ವರಿ ವೃತ್ತ, ಕೆಎಸ್ಆರ್‌ಟಿಸಿ ಹಾಗೂ ಖಾಸಗಿ ಬಸ್‌ ನಿಲ್ದಾಣ, ಬಿ.ರಾಚಯ್ಯ ಜೋಡಿರಸ್ತೆ ಸೇರಿದಂತೆ ಅನೇಕ ಕಡೆಗಳಲ್ಲಿ ನೀರು ಸಂಗ್ರಹಗೊಂಡಿತು. ಕೆಲ ರಸ್ತೆಗಳು ಜಲಾವೃತಗೊಂಡಿದ್ದರಿಂದ ವಾಹನ ಸವಾರರಿಗೆ ತೊಂದರೆ ಉಂಟಾಯಿತು.

ಜಿಲ್ಲೆಯ ಕೊಳ್ಳೇಗಾಲ, ಹನೂರಿನಲ್ಲಿ ತುಂತುರು ಮಳೆಯಾಗಿದೆ. ಯಳಂದೂರು, ಗುಂಡ್ಲುಪೇಟೆ ಹಾಗೂ ಸಂತೇಮರಹಳ್ಳಿಯಲ್ಲಿ ಮೋಡಕವಿದ ವಾತಾವರಣ ಇತ್ತು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !