ಕಾನ್‌ಸ್ಟೆಬಲ್‌ ಮೇಲೆ ಹಲ್ಲೆ; ತರಕಾರಿ ವ್ಯಾಪಾರಿ ಬಂಧನ

7

ಕಾನ್‌ಸ್ಟೆಬಲ್‌ ಮೇಲೆ ಹಲ್ಲೆ; ತರಕಾರಿ ವ್ಯಾಪಾರಿ ಬಂಧನ

Published:
Updated:

ಚಾಮರಾಜನಗರ: ಪಟ್ಟಣದ ದೊಡ್ಡ ಅಂಗಡಿ ಬೀದಿಯಲ್ಲಿ ತರಕಾರಿ ವ್ಯಾಪಾರಿಯೊಬ್ಬ ಪೊಲೀಸ್‌ ಹೆಡ್‌ಕಾನ್‌ಸ್ಟೆಬಲ್‌ ಮೇಲೆ ಗುರುವಾರ ಹಲ್ಲೆ ನಡೆಸಿದ್ದಾರೆ.

ಗುರುವಾರ ಬೆಳಿಗ್ಗೆ 11.30ಕ್ಕೆ ಈ ಘಟನೆ ನಡೆದಿದೆ. ಲೋಕೇಶ್‌ ಎಂಬ ವ್ಯಾಪಾರಿ ಈ ಕೃತ್ಯ ಎಸಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.

‘ನಮ್ಮ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಪ್ರಸನ್ನ ಅವರು ಇಬ್ಬರು ಸಿಬ್ಬಂದಿಯೊಂದಿಗೆ ದೊಡ್ಡ ಅಂಗಡಿ ಬೀದಿಗೆ ಹೋಗಿದ್ದರು. ಅಲ್ಲಿ ರಸ್ತೆ ಮಧ್ಯದಲ್ಲಿ ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡುತ್ತಿ‌ದ್ದವರಿಗೆ ಗಾಡಿಗಳನ್ನು ತೆರವುಗೊಳಿಸುವಂತೆ ಅವರು ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಸನ್ನ ಹಾಗೂ ವ್ಯಾಪಾರಿಗಳ ನಡುವೆ ವಾಗ್ವಾದ ನಡೆದಿದೆ. ಆಗ ಲೋಕೇಶ್‌ ಎಂಬಾತ ಹಲ್ಲೆ ನಡೆಸಿದ್ದಾನೆ’ ಎಂದು ಪಟ್ಟಣ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಎಸ್‌.ಎಲ್‌. ಸಾಗರ್‌ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಲೋಕೇಶ್‌ ವಿರುದ್ಧ  ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಹಲ್ಲೆ ನಡೆಸಿದ ಆರೋಪಗಳನ್ನು ಹೊರಿಸಲಾಗಿದೆ’ ಎಂದು ಅವರು ಹೇಳಿದ್ದಾರೆ. 

‘ಪ್ರಸನ್ನ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಒಂದು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !