ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2019ರ ಪ್ರಧಾನಿ ಹುದ್ದೆ ಖಾಲಿ ಇಲ್ಲ: ನಕ್ವಿ

Last Updated 3 ಜೂನ್ 2018, 19:30 IST
ಅಕ್ಷರ ಗಾತ್ರ

ಪಣಜಿ: ‘2019ರ ಪ್ರಧಾನಿ ಹುದ್ದೆ ಖಾಲಿ ಇಲ್ಲ’ ಎಂದು ಹೇಳಿರುವ ಕೇಂದ್ರ ಸಚಿವ ಮುಖ್ತಾರ್‌ ಅಬ್ಬಾಸ್‌ ನಕ್ವಿ, ‘ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲಿದೆ’ ಎಂದಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೋದಿ ವಿರೋಧಿ ಗುಂಪಿನಲ್ಲಿ ಎರಡು ಡಜನ್‌ಗೂ ಹೆಚ್ಚು ಜನರು ಪ್ರಧಾನಿ ಹುದ್ದೆ ಆಕಾಂಕ್ಷಿಗಳಿದ್ದಾರೆ. ಆದರೆ, ಅವರಿಂದ ಸ್ಥಿರ ಸರ್ಕಾರ ನೀಡುವುದು ಸಾಧ್ಯ ಇಲ್ಲ’ ಎಂದರು.

‘ಅಲ್ಪಸಂಖ್ಯಾತರಲ್ಲಿ ಅಭದ್ರತಾ ಭಾವನೆ ಮೂಡಿಸುವ ಮೂಲಕ ಕೆಲವು ರಾಜಕೀಯ ಪಕ್ಷಗಳು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮರೆ ಮಾಚಲು ಕುತಂತ್ರ ನಡೆಸಿವೆ. ಆದರೆ, ಭಾರತದಲ್ಲಿ ಅಲ್ಪಸಂಖ್ಯಾತರು ಸುರಕ್ಷಿತವಾಗಿದ್ದು, ಅವರ ಹಕ್ಕಗಳ ರಕ್ಷಣೆಯೂ ಆಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT