31 ವಾರ್ಡ್‌ಗಳಲ್ಲೂ ಜೆಡಿಎಸ್‌ ಸ್ಪರ್ಧೆ

7

31 ವಾರ್ಡ್‌ಗಳಲ್ಲೂ ಜೆಡಿಎಸ್‌ ಸ್ಪರ್ಧೆ

Published:
Updated:

ಚಾಮರಾಜನಗರ: ಪಟ್ಟಣದ ಎಲ್ಲ 31 ವಾರ್ಡ್‌ಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್‌ ಚಾಮರಾಜನಗರ ಘಟಕ ಅಧ್ಯಕ್ಷ ಜಿ.ಎಂ. ಶಂಕರ್ ಹೇಳಿದರು.

ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಗರಸಭಾ ಚುನಾವಣೆಯ ಸಂಬಂಧವಾಗಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಮುಖಂಡರ ಸಲಹೆ, ಅಭಿಪ್ರಾಯಗಳನ್ನು ಸಂಗ್ರಹಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದರು. 

‘ನಗರಸಭೆ ಚುನಾವಣೆಗಾಗಿ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಕೆಲಸ ಮಾಡಬೇಕು. ಎಚ್.ಡಿ. ಕುಮಾರಸ್ವಾಮಿ ಅವರು ಈ ಮೊದಲು 20 ತಿಂಗಳ ಅವಧಿಯಲ್ಲಿ ಮಾಡಿರುವ ಜನಪರ ಕಾರ್ಯಕ್ರಮಗಳು ಹಾಗೂ ನೂತನ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಿಳಿಸಿಕೊಡುವ ಮೂಲಕ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು’ ಎಂದು ಕರೆ ನೀಡಿದರು.

ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಿ.ಕೆ. ರಂಗರಾಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ್, ರಾಜ್ಯ ಕಾರ್ಯದರ್ಶಿ ಸೈಯದ್‌ ನಜೀಬುಲ್ಲಾ, ಅಲ್ಪಸಂಖ್ಯಾತ ಅಧ್ಯಕ್ಷ ಸಿಟಿಜನ್‌ ಪುರ್ಖಾನ್, ಜಿಲ್ಲಾ ಸೇವಾದಳದ ಅಧ್ಯಕ್ಷ ನಯೀಮ್, ಜಿಲ್ಲಾ ಎಸ್‌ಟಿ ಅಧ್ಯಕ್ಷ ನಾಗೇಶ್‌ ನಾಯಕ, ಟೌನ್ ಮಹಿಳಾ ಘಟಕದ ಅಧ್ಯಕ್ಷೆ ವಿಜಯಕುಮಾರಿ, ಹರದನಹಳ್ಳಿ ರಾಮಚಂದ್ರು ಸಭೆಯಲ್ಲಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !