ಗಿರಿಜನರಿಗೆ ಕಾನೂನಿನ ಬಗ್ಗೆ ತಿಳಿ ಹೇಳಿದ ತಜ್ಞರು

7
ಕಾಡಿಗೆರೆ, ಬೇಡಗುಳಿ, ಎತ್ತೇಗೌಡನದೊಡ್ಡಿಯಲ್ಲಿ ಕಾನೂನು ಅರಿವು

ಗಿರಿಜನರಿಗೆ ಕಾನೂನಿನ ಬಗ್ಗೆ ತಿಳಿ ಹೇಳಿದ ತಜ್ಞರು

Published:
Updated:
Deccan Herald

ಚಾಮರಾಜನಗರ: ತಾಲ್ಲೂಕಿನ ಕಾಡಿಗೆರೆ, ಮಾರಿಗುಡಿ ಪೋಡು ಮತ್ತು ಬೇಡಗುಳಿ ಗಿರಿಜನರ ಕಾಲೊನಿ ಹಾಗೂ ಎತ್ತೇಗೌಡನ ದೊಡ್ಡಿಯಲ್ಲಿ ಭಾನುವಾರ ಕಾನೂನು ಸಾಕ್ಷರತಾ ಅರಿವು ಕಾರ್ಯಕ್ರಮ ನಡೆಯಿತು.‌

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಸಾಧನ ಸಂಸ್ಥೆಗಳು ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿದ್ದವು.

ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ ಅವರು ಜನನ ಪ್ರಮಾಣಪತ್ರ, ಮರಣ ಪ್ರಮಾಣಪತ್ರದ ಅಗತ್ಯಗಳನ್ನು ವಿವರಿಸಿದರು. ಕಡ್ಡಾಯವಾಗಿ ಎಲ್ಲರೂ ಅವುಗಳನ್ನು ಮಾಡಿಸಿಕೊಳ್ಳುವಂತೆ ಸೂಚಿಸಿದರು.

ಪೋಷಕರು ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಸೇರಿಸಬೇಕು. ಮಕ್ಕಳ ಶಿಕ್ಷಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತ‌ಂದಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಸಂಪ್ರದಾಯಗಳಿಗೆ ಕಟ್ಟು ಬಿದ್ದು ಬಾಲ್ಯ ವಿವಾಹ ಮಾಡಿಸಬಾರದು. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ದುಡಿಮೆಗೆ ತಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಹೇಳಿದರು.

ವಕೀಲರ ಸಂಘದ ಕಾರ್ಯದರ್ಶಿ ಆರ್‌.ಅರುಣ್‌ ಕುಮಾರ್‌, ವಕೀಲರಾದ ಪುಟ್ಟಸ್ವಾಮಿ, ಶಿವಲಿಂಗೇಗೌಡ, ಜಯಪ್ರಕಾಶ್‌ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಕುಮಾರನಾಯಕ್‌, ಪುಣಜನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ರಾಮಸ್ವಾಮಿ, ಪುಣಜನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದರಾಜು, ಕಾರ್ಯದರ್ಶಿ ನಾಗನಾಯಕ್‌, ವಲಯ ಅರಣ್ಯಾಧಿಕಾರಿ ರಾಚಪ್ಪಾಜಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !