ಮಂಗಳವಾರ, ಜೂನ್ 22, 2021
28 °C

ವಿದ್ಯಾರ್ಥಿ ನಿಲಯಗಳಿಗೆ ಸಚಿವರ ದಿಢೀರ್‌ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಪುಟ್ಟರಂಗ ಶೆಟ್ಟಿ ಅವರು ಆಹಾರ ಪರಿಶೀಲಿಸಿದರು

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಶನಿವಾರ ಪಟ್ಟಣದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ವೃತ್ತಿಪರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

ಮಹದೇಶ್ವರ ಕಾಲೋನಿ ಬಳಿಯಿರುವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಆಹಾರ ನೀಡುತ್ತಿದ್ದಾರೋ ಇಲ್ಲವೋ ಎಂಬುದನ್ನು ಸ್ವತಃ ಆಹಾರ ಸೇವಿಸಿ ಪರಿಶೀಲಿಸಿದರು. ನಂತರ ವಿದ್ಯಾರ್ಥಿಗಳಿಂದ ಕು‌ಂದುಕೊರತೆಗಳ ಬಗ್ಗೆ ಮಾಹಿತಿ ಪಡೆದರು.

ಅಡುಗೆ ಮನೆ ದಾಸ್ತಾನು, ಕಂಪ್ಯೂಟರ್ ಕೊಠಡಿ, ಹಾಜರಾತಿ ಪರಿಶೀಲನೆ, ಶೌಚಾಲಯದ ಸ್ವಚ್ಛತೆ, ಮಲಗುವ ಕೊಠಡಿಗಳು, ವಾಚನಾಲಯ ಹಾಗೂ ಕಟ್ಟಡಗಳ ಸುತ್ತಮುತ್ತಲಿನ ಸ್ವಚ್ಛತೆಯ ಬಗ್ಗೆ ಪರಿಶೀಲಿಸಿ ನಿಲಯಗಳ ಸುತ್ತ ಸುತ್ತುಗೋಡೆಯನ್ನು ನಿರ್ಮಿಸುವಂತೆ ಅಧಿಕಾರಿಗಳಿಗೆ‌ ನಿರ್ದೇಶನ ನೀಡಿದರು.

ವಿದ್ಯಾರ್ಥಿಗಳಿಗೆ ಉತ್ತಮವಾದ ಆಹಾರ, ಮಲಗುವ ಕೊಠಡಿಗಳಿಗೆ ಉತ್ತಮವಾದ ಹಾಸಿಗೆಗಳು, ಆಧುನಿಕ ಕಂಪ್ಯೂಟರ್‌ಗಳನ್ನು ನೀಡುವುದು ಸೇರಿದಂತೆ ಮಕ್ಕಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆ ಮಾಡಲು ಸೂಚಿಸಿದರು.

‘ಮುಂದಿನ ಬಾರಿ ನಾನು ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡುವಾಗ ಯಾವುದೇ ಕುಂದುಕೊರತೆಗಳು ಇರಬಾರದು’ ಎಂದು ಎಚ್ಚರಿಸಿದರು.

ಸರ್ಕಾರದಿಂದ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ನೀಡುತ್ತಿರುವ ವಿಶೇಷ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರಪ್ರಸಾದ್, ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು