ಶುಕ್ರವಾರ, ಏಪ್ರಿಲ್ 3, 2020
19 °C

ಕುಮಾರಸ್ವಾಮಿಯೇ ಮುಖ್ಯಮಂತ್ರಿ: ಎನ್‌.ಮಹೇಶ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಕೊಳ್ಳೇಗಾಲ: ‘ಸಿದ್ದರಾಮಯ್ಯ ಅವರು ಎಲ್ಲಿ ಮುಖ್ಯಮಂತ್ರಿ ಆಗುತ್ತಾರೆ? ಸಮಿಶ್ರ ಸರ್ಕಾರದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್‌.ಮಹೇಶ್‌ ಶುಕ್ರವಾರ ಹೇಳಿದರು. 

ಕೊಳ್ಳೇಗಾಲ ನಗರಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ಈ ಸರ್ಕಾರದಲ್ಲಿ ಕುಮಾರಸ್ವಾಮಿ ಅವರನ್ನು ಬಿಟ್ಟು ಇನ್ನೊಬ್ಬರು ಹೇಗೆ ಮುಖ್ಯಮಂತ್ರಿ ಆಗಲು ಸಾಧ್ಯ. ನಾನು ಅವರ ಸಂಪುಟದಲ್ಲಿ ಸಚಿವನಾಗಿದ್ದೇನೆ. ಹಾಗಾಗಿ ನನ್ನ ಸಂಪೂರ್ಣ ಬೆಂಬಲ ಕುಮಾರಸ್ವಾಮಿಯವರಿಗೆ. ಕಾಂಗ್ರೆಸ್‌ ಶಾಸಕರೂ ಅವರನ್ನೇ ಬೆಂಬಲಿಸುತ್ತಿದ್ದಾರೆ’ ಎಂದರು.

‘ರಾಜ್ಯದ ಜನರಿಗಾಗಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ತರಬೇಕು ಎಂಬ ಕನಸನ್ನು ಕುಮಾರಸ್ವಾಮಿ ಹೊಂದಿದ್ದಾರೆ. ಅವರಿಗೆ ಯಾರೂ ತೊಂದರೆ ಮಾಡಬಾರದು’ ಎಂದು ಹೇಳಿದರು.

ಮುಖ್ಯಮಂತ್ರಿ ಅವರು ದೇವಾಲಯಗಳಿಗೆ ಭೇಟಿ ನೀಡುತ್ತಿರುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಕುಮಾರಸ್ವಾಮಿ ಅವರು ದೇವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಅದು ಅವರ ಸಂವಿಧಾನ ಬದ್ಧ ಹಕ್ಕು. ಆದರೆ, ವಿರೋಧ ಪಕ್ಷದವರು ಅದನ್ನು ಟೆಂಪಲ್‌ ರನ್ ಎಂದು ಟೀಕಿಸುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು