ಚಾಮರಾಜನಗರ, ಕೊಳ್ಳೇಗಾಲ ನಗರಸಭೆ ಅತಂತ್ರ

7

ಚಾಮರಾಜನಗರ, ಕೊಳ್ಳೇಗಾಲ ನಗರಸಭೆ ಅತಂತ್ರ

Published:
Updated:

ಚಾಮರಾಜನಗರ: ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರಸಭೆಗಳಲ್ಲಿ ಅತಂತ್ರ ಫಲಿತಾಂಶ ಬಂದಿದೆ.

31 ವಾರ್ಡ್‌ಗಳ ಚಾಮರಾಜನಗರದಲ್ಲಿ 15  ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಹುಮತಕ್ಕೆ 17 ಸ್ಥಾನಗಳನ್ನು ಗೆಲ್ಲಬೇಕಿತ್ತು. 

ಕಾಂಗ್ರೆಸ್ 8, ಎಸ್‌ಡಿಪಿಐ 6, ಬಿಎಸ್‌ಪಿ 1 ಸ್ಥಾನಗಳನ್ನು ಪಡೆದಿವೆ. ಒಂದು ವಾರ್ಡ್‌ನಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ. 

ಕೊಳ್ಳೇಗಾಲ ನಗರಸಭೆಯಲ್ಲೂ ಯಾರಿಗೂ ಬಹುಮತ ಸಿಕ್ಕಿಲ್ಲ: 31 ವಾರ್ಡ್ಗಳ ಪೈಕಿ 30 ಸ್ಥಾನಗಳ ಫಲಿತಾಂಶ ಪ್ರಕಟವಾಗಿದೆ.  11 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ದೊಡ್ಡ ಪಕ್ಷವಾಗಿದೆ. ಬಿಎಸ್‌ಪಿ 9, ಬಿಜೆಪಿ 6 ಹಾಗೂ ಪಕ್ಷೇತರರು ನಾಲ್ಕು ಸ್ಥಾನಗಳಲ್ಲಿ ಗೆದ್ದಿದ್ದಾರೆ.

9ನೇ ವಾರ್ಡ್‌ನಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ನಿಧನರಾಗಿದ್ದರಿಂದ ಅಲ್ಲಿನ ಚುನಾವಣೆಯನ್ನು ಮುಂದೂಡಲಾಗಿತ್ತು. 

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !