ಬೇಡಿಕೆ ಈಡೇರಿಕೆಗೆ ಗ್ರಾ.ಪಂ ನೌಕರರ ಒತ್ತಾಯ

7

ಬೇಡಿಕೆ ಈಡೇರಿಕೆಗೆ ಗ್ರಾ.ಪಂ ನೌಕರರ ಒತ್ತಾಯ

Published:
Updated:
ಯಳಂದೂರು ಗ್ರಾಮ ಪಂಚಾಯಿತಿ ನೌಕರ ಸಂಘದ ಸದಸ್ಯರು ಶನಿವಾರ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು

ಯಳಂದೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರು ಪಟ್ಟಣದಲ್ಲಿ  ಪ್ರತಿಭಟನೆ ನಡೆಸಿದರು.

ಸರ್ಕಾರದ ಆದೇಶದಂತೆ ರಾಜ್ಯದ ನೌಕರರಿಗೆ ಇಎಫ್ಎಂಎಸ್ ಮೂಲಕ ವೇತನ ಸಿಗುವಂತೆ ಕ್ರಮ ವಹಿಸಬೇಕು. ಸ್ವಚ್ಛತಾಗಾರರು, ನೀರುಗಂಟಿಗಳು, ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಆಗಿರುವ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

10 ವರ್ಷ ಸೇವೆ ಸಲ್ಲಿಸಿರುವ ಬಿಲ್ ಕಲೆಕ್ಟರ್‌ಗಳಿಗೆ ಸಿಗುತ್ತಿದ್ದ ಗ್ರೇಡ್-2 ಕಾರ್ಯದರ್ಶಿ ಬಡ್ತಿಗೆ ಪಿಯುಸಿ ವಿದ್ಯಾರ್ಹತೆಯನ್ನು ನಿಗದಿಗೊಳಿಸಿದೆ. ಹಾಗಾಗಿ, ಹಿಂದಿನ ಮಾನದಂಡವನ್ನು ಅನುಸರಿಸಬೇಕು. ಪೆನ್ಷನ್, ವೈದ್ಯಕೀಯ ತುಟ್ಟಿ ಭತ್ಯೆ ಸಿಗುವಂತೆ ಕ್ರಮ ವಹಿಸಬೇಕು. ಸೇವಾ ನಿಯಮಾವಳಿ ರಚಿಸಬೇಕು. ಗ್ರಾಮ ಪಂಚಾಯಿಗಳನ್ನು ಗ್ರೇಡ್–2 ನಿಂದ ಗ್ರೇಡ್–1ಕ್ಕೆ ಏರಿಸಬೇಕು ಎಂದು ಒತ್ತಾಯಿಸಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಸ್‌. ರಾಜು ಅವರಿಗೆ ಮನವಿ ಸಲ್ಲಿಸಿದರು.

ಯರಿಯೂರು ಮಹದೇವಸ್ವಾಮಿ, ಕೃಷ್ಣ, ಪಳನಿಸ್ವಾಮಿ, ಕುಮಾರ್, ಶಿವು, ಸುಬ್ಬಣ್ಣ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳ ನೌಕರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !