ಪಿಯುಸಿ ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ

7
ಆರೋಪಿ, ಆತನ ಅಪ್ಪ, ತಮ್ಮ, ಸಂಬಂಧಿ ಬಂಧನ

ಪಿಯುಸಿ ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ

Published:
Updated:

ಕೊಳ್ಳೇಗಾಲ: ತಾಲ್ಲೂಕಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ರಾಜ ಎಂಬಾತ ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ.

ವಿದ್ಯಾರ್ಥಿನಿಯನ್ನು ಅಪಹರಿಸಲು ರಾಜನಿಗೆ ಸಹಕರಿಸಿದ ಆತನ ತಮ್ಮ, ತಂದೆ, ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿ ಆ. 27ರಂದು ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ಅಲ್ಲಿಯೇ ಇದ್ದ ಹಾಸ್ಟೆಲ್‌ಗೆ ಹೋಗುತ್ತಿದ್ದಾಗ ಆರೋಪಿಗಳು
ಅಪಹರಿಸಿದ್ದಾರೆ. ಮಗಳು ಕಾಣೆಯಾಗಿರುವ ವಿಷಯ ತಿಳಿದ ಪೋಷಕರು ಹುಡುಕಾಟದಲ್ಲಿ ತೊಡಗಿದ್ದರು.

ಆರೋಪಿ ರಾಜ ಗುರುವಾರ ವಿದ್ಯಾರ್ಥಿನಿಯನ್ನು ತಾಂಡಾದಲ್ಲಿ ಬಿಟ್ಟು ಹೋಗಿದ್ದಾನೆ.

ಈ ವೇಳೆ, ಆಕೆಯನ್ನು ವಿಚಾರಿಸಿದಾಗ, ಅತ್ಯಾಚಾರ ನಡೆಸಿರುವುದು ಗೊತ್ತಾಗಿದೆ. ಪೋಷಕರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 1

    Sad
  • 0

    Frustrated
  • 0

    Angry

Comments:

0 comments

Write the first review for this !