ಸುಳ್ವಾಡಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ

7

ಸುಳ್ವಾಡಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ

Published:
Updated:

ಮೈಸೂರು: ಸುಳ್ವಾಡಿ ಗ್ರಾಮದ ವಿಷ ಪ್ರಸಾದ ದುರಂತದಲ್ಲಿ ಅಸ್ವಸ್ಥಗೊಂಡು ಇಲ್ಲಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದ ಮಲ್ಲಿಬಾಯಿ ಅವರು ಸೋಮವಾರ ಮೃತಪಟ್ಟಿದ್ದಾರೆ.

ಇವರ ಪತಿ ಕೃಷ್ಣಾನಾಯಕ ಸಹ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಮೃತಪಟ್ಟಿದ್ದರು. ಇದುವರೆಗೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿದೆ.

ಪ್ರಸಾದದಲ್ಲಿ ಆರ್ಗನೊ ಪಾಸ್ಪರಸ್ ಪತ್ತೆ- ಐಜಿಪಿ

ಅಸ್ವಸ್ಥರು ಸೇವಿಸಿದ ಪ್ರಸಾದದಲ್ಲಿ ಆರ್ಗನೊ ಪಾಸ್ಪರಸ್ ರಾಸಾಯನಿಕ ಅಂಶ ಇರುವುದು ವಿಧಿವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯಲ್ಲಿ ಪತ್ತೆಯಾಗಿದೆ ಎಂದು ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಸುದ್ದಿಗಾರರಿಗೆ ತಿಳಿಸಿದರು.

13 ಜನರ ಅಧಿಕಾರಿಗಳ ತಂಡ ಪ್ರಕರಣದ ತನಿಖೆ ನಡೆಸುತ್ತಿದೆ. ಮಹತ್ವದ ಸುಳಿವು ಲಭ್ಯವಾಗಿದೆ. ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 6

  Sad
 • 0

  Frustrated
 • 0

  Angry

Comments:

0 comments

Write the first review for this !