ಕೊಳ್ಳೇಗಾಲ ನಗರಸಭೆ 9ನೇ ವಾರ್ಡಿಗೆ ಚುನಾವಣೆ: ವೇಳಾಪಟ್ಟಿ ಪ್ರಕಟ

7

ಕೊಳ್ಳೇಗಾಲ ನಗರಸಭೆ 9ನೇ ವಾರ್ಡಿಗೆ ಚುನಾವಣೆ: ವೇಳಾಪಟ್ಟಿ ಪ್ರಕಟ

Published:
Updated:

ಚಾಮರಾಜನಗರ: ಬಹುಜನ ಸಮಾಜ ಪಕ್ಷದಿಂದ (ಬಿಎಸ್‌ಪಿ) ಸ್ಪರ್ಧಿಸಿದ್ದ ಸಿ.ಎಸ್. ರಮೇಶ್ ಅವರ ನಿಧನ ಹೊಂದಿದ್ದರಿಂದ ರದ್ದಾಗಿದ್ದ ಕೊಳ್ಳೇಗಾಲ ನಗರಸಭೆಯ 9ನೇ ವಾರ್ಡಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ಅಕ್ಟೋಬರ್ 9ರಂದು ಚುನಾವಣಾ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಹೊರಡಿಸುವರು. ನಾಮಪತ್ರ ಸಲ್ಲಿಸಲು ಅಕ್ಟೋಬರ್ 12 ಕಡೆಯ ದಿನ. ಅಕ್ಟೋಬರ್ 17ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ.

ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಅಕ್ಟೋಬರ್ 20 ಕಡೆ ದಿನ. ಮತದಾನ ಅವಶ್ಯವಿದ್ದರೆ 28ರಂದು ಬೆಳಿಗ್ಗೆ 7ರಿಂದ ಸಂಜೆ 5 ರವರೆಗೆ ನಡೆಯಲಿದೆ. ಮರು ಮತದಾನ ಅವಶ್ಯವಿದ್ದಲ್ಲಿ ಅಕ್ಟೋಬರ್ 30ರಂದು ನಡೆಸಲಾಗುತ್ತದೆ.

ಮತಗಳ ಎಣಿಕೆ ಕಾರ್ಯವು ಅಕ್ಟೋಬರ್ 31ರಂದು ಬೆಳಿಗ್ಗೆ 8 ಗಂಟೆಗೆ ಆಯಾ ತಾಲ್ಲೂಕು ಕೇಂದ್ರದಲ್ಲಿ ನಡೆಯಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !