ನದಿಗೆ ನೀರು: ಸುರಕ್ಷತೆಗೆ ಕ್ರಮ ವಹಿಸಲು ಸೂಚನೆ

7
ತಹಶೀಲ್ದಾರ್ ಚಂದ್ರಮೌಳಿ ಅಧ್ಯಕ್ಷತೆಯಲ್ಲಿ ಸಭೆ

ನದಿಗೆ ನೀರು: ಸುರಕ್ಷತೆಗೆ ಕ್ರಮ ವಹಿಸಲು ಸೂಚನೆ

Published:
Updated:
ಕೊಳ್ಳೇಗಾಲ ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಯಿತು

ಕೊಳ್ಳೇಗಾಲ: ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಂದ ಹೆಚ್ಚಿನ ನೀರು ಬಿಡುತ್ತಿದ್ದು, ಕಾವೇರಿ ನದಿಯಲ್ಲಿ ನೀರಿನ ಮಟ್ಟವು ಹೆಚ್ಚಾಗಿದೆ. ಹೀಗಾಗಿ, ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಹಶೀಲ್ದಾರ್ ಚಂದ್ರಮೌಳಿ ಸೂಚನೆ ನೀಡಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ನಡೆದ ‘ಪ್ರವಾಹಪೀಡಿತ ಪ್ರದೇಶದ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಕುರಿತ ಸಭೆ’ಯಲ್ಲಿ ಅವರು ಮಾತನಾಡಿದರು.

ಪ್ರವಾಹಕ್ಕೆ ಸಂಬಂಧಿಸಿದಂತೆ ಜನರ ದೂರುಗಳಿಗಾಗಿ ಶೀಘ್ರದಲ್ಲೇ 24x7 ಕಾರ್ಯನಿರ್ವಹಿಸುವ ನಿಯಂತ್ರಣ ಕೊಠಡಿ ತೆರೆಯಲಾಗುತ್ತದೆ. ಅಗತ್ಯವಿರುವ ಕಡೆಗಳಲ್ಲಿ ಆಹಾರ ಇಲಾಖೆಯ ಸಹಕಾರದಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಬೇಕು ಎಂದು ಸೂಚಿಸಿದರು.

ಕಾವೇರಿ ನದಿಯ ಬಳಿಗೆ ಜನರು ತೆರಳದಂತೆ ಈಗಾಗಲೇ ಪೊಲೀಸ್ ಇಲಾಖೆಯಿಂದ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರವಾಹದಿಂದಾಗಿ ಬೆಳೆ ಹಾನಿ ಉಂಟಾಗಿರುವ ಬಗ್ಗೆ ಗ್ರಾಮ ಲೆಕ್ಕಾಧಿಕಾರಿಗಳ ಮೂಲಕ ಮಾಹಿತಿ ಪಡೆಯಲು ಸೂಚಿಸಲಾಗಿದೆ. ಪ್ರವಾಹದ ಸಂದರ್ಭದಲ್ಲಿ ವಿದ್ಯುತ್‌ ಅವಘಡ ಸಂಭವಿಸದಂತೆ ಚೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಶಿರಸ್ತೇದಾರ್‌ ಶ್ರೀನಿವಾಸ, ಬಿಇಒ ಶಿವಲಿಂಗಯ್ಯ, ತೋಟಗಾರಿಕೆ ಇಲಾಖೆಯ ಶಶಿಧರ್, ಆರೋಗ್ಯ ಇಲಾಖೆಯ ಶಿವರಾಮೇಗೌಡ, ಪಟ್ಟಣ ಪೊಲೀಸ್ ಠಾಣೆಯ ಪಿಎಸ್‍ಐ ವೀಣಾನಾಯಕ್, ವನರಾಜು, ಅಗ್ನಿಶಾಮಕ ದಳದ ರಮೇಶ್, ಶೇಷ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !