ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ: 19ಕ್ಕೆ ದೇವೇಗೌಡ, 20ಕ್ಕೆ ನರೇಂದ್ರ ಮೋದಿ ಪ್ರಚಾರ

Published 17 ಏಪ್ರಿಲ್ 2024, 13:39 IST
Last Updated 17 ಏಪ್ರಿಲ್ 2024, 13:39 IST
ಅಕ್ಷರ ಗಾತ್ರ

ಚಿಂತಾಮಣಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಏಪ್ರಿಲ್ 19 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಶಿಡ್ಲಘಟ್ಟ ರಸ್ತೆಯ ವೈ ಹುಣಸೇನಹಳ್ಳಿಯಲ್ಲಿ ಲೋಕಸಭಾ ಚುನಾವಣಾ ಅಂಗವಾಗಿ ನಡೆಯಲಿರುವ ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ ಎಂ.ಕೃಷ್ಣಾರೆಡ್ಡಿ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಪ್ರಧಾನಿ ದೇವೇಗೌಡರು ಭಾಗವಹಿಸಲಿರುವ ಬಹಿರಂಗ ಸಭೆಗೆ ತಾಲ್ಲೂಕಿನಿಂದ 10 ಸಾವಿರ ಜನ ಭಾಗವಹಿಸುತ್ತಾರೆ. ತಾಲ್ಲೂಕಿನ ಪ್ರತಿ ಪಂಚಾಯಿತಿಯಿಂದ 200 ಬೈಕ್‌ ಹೊರಡಲಿವೆ. ಮೈತ್ರಿ ಅಭ್ಯರ್ಥಿ ಮಲ್ಲೇಶಬಾಬು ಪರವಾಗಿ ಮತಯಾಚನೆ ನಡೆಯಲಿದೆ ಎಂದರು.

ಏಪ್ರಿಲ್ 20 ರಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಾರೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳ ಮೈತ್ರಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತಾರೆ. ತಾಲ್ಲೂಕಿನಿಂದ ಸುಮಾರು 10 ಸಾವಿರ ಜನ ಭಾಗವಹಿಸುತ್ತಾರೆ ಎಂದು ಹೇಳಿದರು.

ಮುಖಂಡ ಜಿ.ಎನ್.ವೇಣುಗೋಪಾಲ್, ಬೈರಾರೆಡ್ಡಿ, ರಾಜಣ್ಣ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT