ಚಿಕ್ಕಬಳ್ಳಾಪುರ: ದೇಶದಲ್ಲಿ 100 ಕೋಟಿ ಡೋಸ್ಗೂ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಫಲವಾಗಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಲು ಸಾಧ್ಯವಾಯಿತು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಲಿಂಗಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ₹ 34,000 ಕೋಟಿ ವೆಚ್ಚ ಮಾಡಿ ಲಸಿಕೆ ನೀಡಿದ್ದಾರೆ. ಇದರಲ್ಲಿ ಶೇ 96ರಷ್ಟು ಹಣ ಸರ್ಕಾರದ್ದು ಮತ್ತು ಶೇ 4ರಷ್ಟು ಹಣ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳದ್ದು ಎಂದರು.

ಬಿಜೆಪಿ ಜಿಲ್ಲಾ ವಕ್ತಾರ ರಮೇಶ್ ಬಾಯರಿ ಮಾತನಾಡಿ, ಎಲ್ಲರ ಸಹಕಾರದಿಂದ 100 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ದೇಶದ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಈ ಸಂಭ್ರಮಾಚರಣೆ ನಡೆಸಲಾಗುತ್ತಿದೆ ಎಂದರು.

ವೈದ್ಯಕೀಯ ಪ್ರಕೋಷ್ಠ ಸಂಚಾಲಕ ರಮೇಶ್, ಜನಹಿತದ ಕಾರಣ ಕೇಂದ್ರ ಸರ್ಕಾರ ಈ ಕೆಲಸ ಮಾಡಿದೆ ಎಂದರು.

ರಾಮಣ್ಣ, ಅಶೋಕ್ ಲಕ್ಷ್ಮಿಪತಿ ಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.