ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟ | 13ರ ಬಾಲಕಿ ಗರ್ಭಿಣಿ: ಮುಖ್ಯ ಶಿಕ್ಷಕ ಬಂಧನ

Published 29 ಮೇ 2024, 0:10 IST
Last Updated 29 ಮೇ 2024, 0:10 IST
ಅಕ್ಷರ ಗಾತ್ರ

ಶಿಡ್ಲಘಟ್ಟ (ಚಿಕ್ಕಬಳ್ಳಾಪುರ): ತಾಲ್ಲೂಕಿನ ಸರ್ಕಾರಿ ಶಾಲೆಯೊಂದರ ಏಳನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದು ಇದಕ್ಕೆ ಕಾರಣನಾದ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. 

13 ವರ್ಷದ ಬಾಲಕಿಯ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿತ್ತು. ಚಿಕಿತ್ಸೆಗಾಗಿ ಪೋಷಕರು ಆಸ್ಪತ್ರೆಗೆ ಕರೆದೊಯ್ದ ವೇಳೆ ಆಕೆ ಗರ್ಭಿಣಿಯಾಗಿರುವ ವಿಷಯ ಗೊತ್ತಾಗಿದೆ.

ಬಾಲಕಿಯನ್ನು ವಿಚಾರಿಸಿದಾಗ ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾಳೆ. ಬಾಲಕಿಯ ದೂರು ಆಧರಿಸಿ ಮುಖ್ಯ ಶಿಕ್ಷಕನನ್ನು ಬಂಧಿಸಿರುವ ಗ್ರಾಮಾಂತರ ಠಾಣೆ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ನ್ಯಾಯಾಲಯದ ಎದುರು ಶಿಕ್ಷಕನನ್ನು ಹಾಜರು ಪಡಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT