ಗೌರಿಬಿದನೂರು (ಚಿಕ್ಕಬಳ್ಳಾಪುರ): ತಾಲ್ಲೂಕಿನ ನಗರಗೆರೆ ಗ್ರಾಮದಲ್ಲಿ 20 ದಿನದ ಗಂಡು ಶಿಶುವನ್ನು ಪೋಷಕರೇ ಮಾರಾಟ ಮಾಡಿದ್ದಾರೆ. ಗ್ರಾಮದ ಬುಡಕಟ್ಟು ಜನಾಂಗದ ಗಂಗಣ್ಣ ಮತ್ತು ಮಂಜುಳಾ ದಂಪತಿ ವಾರದ ಹಿಂದೆ ಶಿಶುವನ್ನು ಬೆಂಗಳೂರಿನ ನಿವಾಸಿಗಳಿಗೆ ಮಾರಾಟ ಮಾಡಿದ್ದಾರೆ ಎಂದು ಹೇಳಲಾಗಿದೆ.

ವಿಷಯ ತಿಳಿಯುತ್ತಲೇಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ಜಿಲ್ಲಾ ಮಕ್ಕಳ ಸಂರಕ್ಷಣಾ ಘಟಕದ ಸಿಬ್ಬಂದಿನಗರಗೆರೆಗೆ ತೆರಳಿ ಪೋಷಕರನ್ನು ತನಿಖೆಗೆ ಒಳಪಡಿಸಿದ್ದು, ಶಿಶು ಮಾರಾಟ ಸುದ್ದಿಖಚಿತವಾಗಿದೆ. ಗ್ರಾಮಾಂತರ ಠಾಣೆ ಪೊಲೀಸರ ತನಿಖೆ ವೇಳೆಯೂ ದಂಪತಿ ಇದನ್ನು ಒಪ್ಪಿಕೊಂಡಿದ್ದಾರೆ.

ಶಿಶು ಮಾರಾಟ ಮಾಡಿದ್ದ ದಂಪತಿ ಮತ್ತು ದುಡ್ಡು ಕೊಟ್ಟು ಖರೀದಿಸಿದ್ದ ಬೆಂಗಳೂರು ಮೂಲದ ವ್ಯಕ್ತಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಿಶುವನ್ನು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿ,ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.