ಗುಡಿಬಂಡೆ: ತಾಲ್ಲೂಕಿನಲ್ಲಿ ಡಿ. 27ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. 119 ಸ್ಥಾನಗಳ ಪೈಕಿ 4 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಅಂತಿಮ ಕಣದಲ್ಲಿ 324 ಅಭ್ಯರ್ಥಿಗಳು ಉಳಿದಿದ್ದಾರೆ.

ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 3 ಸ್ಥಾನ ಮತ್ತು ವರ್ಲಕೊಂಡ ಗ್ರಾಮ ಪಂಚಾಯಿತಿಯಲ್ಲಿ 1 ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ ವರದರಾಜು ತಿಳಿಸಿದ್ದಾರೆ.

ಈಗಾಗಲೇ, ಅಭ್ಯರ್ಥಿಗಳಿಗೆ ಚಿಹ್ನೆ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಈ ಚಿಹ್ನೆ ಬಳಸಿಕೊಂಡು ಅಭ್ಯರ್ಥಿಗಳು ಪ್ರಚಾರದಲ್ಲಿ ಮುಳುಗಿದ್ದಾರೆ. ಪ್ರಚಾರ ಕಾರ್ಯದಲ್ಲಿ ಅಭ್ಯರ್ಥಿಗಳ ಕುಟುಂಬದವರು, ಬೆಂಬಲಿಗರು ತೊಡಿಸಿಕೊಂಡಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷಾತೀತವಾಗಿದ್ದರೂ ಆಯಾ ರಾಜಕೀಯ ಪಕ್ಷದ ಬೆಂಬಲ ಪಡೆದು ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.