ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಯಲ್ಲಿ ಸುಧಾಕರ್‌ಗೆ ಬೆಂಬಲ: ಕಾಂಗ್ರೆಸ್‌ನಿಂದ ಐವರು ನಗರಸಭೆ ಸದಸ್ಯರ ಉಚ್ಚಾಟನೆ

Published 26 ಜೂನ್ 2023, 12:32 IST
Last Updated 26 ಜೂನ್ 2023, 12:32 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರನ್ನು ಬೆಂಬಲಿಸಿದ್ದ ನಗರಸಭೆಯ ಐದು ಮಂದಿ ಕಾಂಗ್ರೆಸ್ ಸದಸ್ಯರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಇವರ ಸದಸ್ಯತ್ವ ರದ್ದಿಗೆ ಕಾನೂನು ರೀತಿ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್, ಪಕ್ಷದ ಜಿಲ್ಲಾ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಅವರಿಗೆ ಸೂಚಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ 7ನೇ ವಾರ್ಡ್ ಸದಸ್ಯ ಸತೀಶ್, 13ನೇ ವಾರ್ಡ್‌ನ ನಿರ್ಮಲ ಪ್ರಭು, 15ನೇ ವಾರ್ಡ್‌ನ ಅಂಬರೀಷ್, 20ನೇ ವಾರ್ಡ್‌ನ ನರಸಿಂಹಮೂರ್ತಿ, 27ನೇ ವಾರ್ಡ್‌ನ ಎ.ನೇತ್ರಾವತಿ ಅವರನ್ನು ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿದೆ. 

ವಿಧಾನಸಭೆ ಚುನಾವಣೆಯಲ್ಲಿ ಈ ಸದಸ್ಯರು ಬಿಜೆಪಿ ಪರವಾಗಿ ಕೆಲಸ ಮಾಡಿದ್ದರು. ಕೆಪಿಸಿಸಿ ಸದಸ್ಯ ವಿನಯ್ ಎನ್.ಶ್ಯಾಮ್ ಅವರ ಬೆಂಬಲಿಗರಾಗಿದ್ದ ಅಂಬರೀಷ್, ನೇತ್ರಾವತಿ, ನರಸಿಂಹಮೂರ್ತಿ, ವಿನಯ್ ಶ್ಯಾಮ್ ಅವರಿಗೆ ಟಿಕೆಟ್ ದೊರೆಯದಿರುವುದಕ್ಕೆ ಅಸಮಾಧಾನಗೊಂಡು ಬಿಜೆಪಿ ಸೇರಿದ್ದರು. ಬಿಜೆಪಿ ಸರ್ಕಾರದಲ್ಲಿ ಬಿಎಂಟಿಸಿ ಉಪಾಧ್ಯಕ್ಷರಾಗಿದ್ದ ನವೀನ್ ಕಿರಣ್ ಅವರ ತಾಯಿ ಹಾಗೂ 13ನೇ ವಾರ್ಡ್ ಸದಸ್ಯೆ ನಿರ್ಮಲ ಪ್ರಭು ಹಾಗೂ 7ನೇ ವಾರ್ಡ್‌ನ ಸತೀಶ್ ಸಹ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಕೆಲಸ ಮಾಡಿದ್ದರು. ವಿಧಾನಸಭೆ ಚುನಾವಣೆ ಸಮಯದಲ್ಲಿ ಈ ಸದಸ್ಯರ ಪಕ್ಷಾಂತರ ಚಿಕ್ಕಬಳ್ಳಾಪುರದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗೂ ಕಾರಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT