ಶನಿವಾರ, ಅಕ್ಟೋಬರ್ 24, 2020
26 °C
ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ನೂತನ ಯೋಜನೆಗೆ ಚಾಲನೆ

ಚಿಕ್ಕಬಳ್ಳಾಪುರ: ‘ಚಿಲುಮೆ’ ಅಳವಡಿಸಿಕೊಂಡರೆ ₹5,000 ಪ್ರೋತ್ಸಾಹಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಸುಸಜ್ಜಿತ ಪಶು ಚಿಕಿತ್ಸಾ ವಾಹನ ಹಾಗೂ ಮಳೆನೀರು ಸಂಗ್ರಹ ಕುರಿತಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಚಿಲುಮೆ ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಬುಧವಾರ ಚಾಲನೆ ನೀಡಿದರು.

ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಮುಂದಿನ ದಿನಗಳಲ್ಲಿ ನೀರಿಗೆ ತೊಂದರೆ ಆಗದಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಜಾಗೃತಿ ಅಭಿಯಾನ ಅತ್ಯಂತ ಮಹತ್ವದ್ದಾಗಿದೆ. ಪಶು ಚಿಕಿತ್ಸಾ ವಾಹನದ ಮೂಲಕ ಅಗತ್ಯವಿರುವ ಸ್ಥಳಗಳಿಗೆ ತೆರಳಿ ಪಶು ವೈದ್ಯರು ಚಿಕಿತ್ಸೆ ನೀಡಬಹುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.

ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರತಿ ಮನೆಗೆ ಮಳೆನೀರು ಸಂಗ್ರಹ ಅಳವಡಿಸುವ ಯೋಜನೆಗೆ ‘ಚಿಲುಮೆ’ ಎಂದು ಮರುನಾಮಕರಣ ಮಾಡಿಡಲಾಗಿದೆ. ‘ನೀರಿಗಾಗಿ ಒಂದಾಗಿ’ ಎಂಬ ಧ್ಯೇಯವಾಕ್ಯದೊಂದಿಗೆ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಲ್ಲಿ ಈಗಾಗಲೇ ಲಭ್ಯವಿರುವ ಸಂಪ್‍ಗಳಿಗೆ ನೀರು ಸಂಗ್ರಹಿಸಬಹುದು ಅಥವಾ ಇಂಗು ಗುಂಡಿಗಳನ್ನು ನಿರ್ಮಿಸಬಹುದು. ಈ ಯೋಜನೆ ಅಳವಡಿಸಿಕೊಳ್ಳುವ ಮನೆ ಮಾಲೀಕರಿಗೆ ₹5000 ಪ್ರೋತ್ಸಾಹ ಧನ ನೀಡಲಾಗುವುದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಮಧುರ ನಾಥ ರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಣುಕಾ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು