ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 5,223 ಜನರಿಗೆ ಎಚ್‌ಐವಿ

ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಭೆ
Last Updated 26 ನವೆಂಬರ್ 2022, 4:24 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ:ಎಚ್.ಐ.ವಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಡಿ.1ರಂದು ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ರಾಜ್ಯ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿಶ್ವ ಏಡ್ಸ್ ದಿನಾಚರಣೆಯ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಇಲ್ಲಿಯವರೆಗೆ 5,223 ಜನರಿಗೆ ಎಚ್‌ಐವಿ ಸೋಂಕು ತಗುಲಿದೆ. ‌ಈ ಪೈಕಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 1,033, ಚಿಂತಾಮಣಿ ತಾಲ್ಲೂಕಿನಲ್ಲಿ 1,169, ಬಾಗೇಪಲ್ಲಿ ತಾಲ್ಲೂಕಿನಲ್ಲಿ 943, ಗೌರಿಬಿದನೂರು ತಾಲ್ಲೂಕಿನಲ್ಲಿ 1,021, ಗುಡಿಬಂಡೆ ತಾಲ್ಲೂಕಿನಲ್ಲಿ 383 ಹಾಗೂ ಶಿಡ್ಲಘಟ್ಟ ತಾಲ್ಲೂಕಿನಲ್ಲಿ 674 ಜನರು ಸೋಂಕಿಗೆ ಒಳಗಾಗಿದ್ದಾರೆ. ಪ್ರಸ್ತುತ 2,797 ಸೋಂಕಿತರು ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಸೋಂಕಿತರಿಂದ ಮತ್ತೊಬ್ಬರಿಗೆ ಸೋಂಕು ಹರಡದಂತೆ ಅನುಸರಿಸಬೇಕಾದ ವಿಧಾನಗಳ ಬಗ್ಗೆ ಅರಿವು ನೀಡಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಐ.ಇ.ಸಿ ಕಾರ್ಯಚಟುವಟಿಕೆಗಳ ಮೂಲಕ ಸೋಂಕು ಹರಡದಂತೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಡಿ.1ರಂದು ಬೆಳಿಗ್ಗೆ 9.30ಕ್ಟೆ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಕೈಗೊಂಡು ಸಾರ್ವಜನಿಕರಿಗೆ ಏಡ್ಸ್ ಜಾಗೃತಿ ಮೂಡಿಸಬೇಕು. ಜೂನಿಯರ್ ಕಾಲೇಜು ಆವರಣ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮುಂಭಾಗ ಹಾಗೂ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಐಇಸಿ ಮಳಿಗೆಗಳನ್ನು ತೆರೆದು ಎಚ್‌ಐವಿ ಸೋಂಕನ್ನು ಸಂಪೂರ್ಣವಾಗಿ ತಡೆಗಟ್ಟುವ ವಿಧಾನಗಳ ಕುರಿತು ಕರಪತ್ರಗಳು, ಭಿತ್ತಿಪತ್ರಗಳನ್ನು ವಿತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

2022ನೇ ಸಾಲಿನಲ್ಲಿ ‘ಸಮಾನಗೊಳಿಸು’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿ ಜಿಲ್ಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದರು.

ಚಿಕ್ಕಬಳ್ಳಾಪುರ ಸರ್ಕಾರಿ ವೈದ್ಯಕೀಯ ಕಾಲೇಜಿನ ನಿರ್ದೇಶಕ ಸಿದ್ಧೀಕ್ ಎಂ.ಅಹಮ್ಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಯಲ್ಲಾ ರಮೇಶ್ ಬಾಬು, ಜಿಲ್ಲಾ ಪಂಚಾಯಿತಿ ಮುಖ್ಯಯೋಜನಾಧಿಕಾರಿ ಎಂ.ಧನುರೇಣುಕ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT